ಸಮಾಚಾರ

ಬಿಗ್‍ಬಾಸ್ ಸೀಸನ್-6 ಗ್ರ್ಯಾಂಡ್ ಓಪನಿಂಗ್ ದಿನಾಂಕ ಪ್ರಕಟ-ಸ್ಪರ್ಧಿಗಳ EXCLUSIVE ಡೀಟೈಲ್ಸ್ ಇಲ್ಲಿದೆ

ಕನ್ನಡ ಕಿರುತೆರೆಯ ಅತಿದೊಡ್ಡ ಮತ್ತು ಜನಪ್ರಿಯ ರಿಯಾಲಿಟಿ ಷೋ ಬಿಗ್’ಬಾಸ್ ಕಾರ್ಯಕ್ರಮದ ಮತ್ತೊಂದು ಸೀಸನ್ನನ್ನು ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬಿಗ್ ಬಾಸ್ ಮತ್ತೆ ಶುರುವಾಗುತ್ತೆ ಎಂಬ ಸುದ್ದಿ ಹೊರಬಿದ್ದಾಗಲೇ ಸಾಮಾಜಿಕ ಜಾಲತಾಣಗಳಲ್ಲಿ 6ನೇ ಸೀಸನ್ ಅವತ್ತು ಸ್ಟಾರ್ಟ್ ಆಗುತ್ತಂತೆ, ಇವತ್ತು ಸ್ಟಾರ್ಟ್ ಆಗುತ್ತಂತೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದೀಗ ವಾಹಿನಿಯವರೇ ಬಿಗ್ ಬಾಸ್ ಸ್ಟಾರ್ಟಿಂಗ್ ಡೇಟ್ ಅನ್ನು ಅನೌನ್ಸ್ ಮಾಡಿದ್ದಾರೆ.

 

 

ಬಹು ನಿರೀಕ್ಷೆಯ ಬಿಗ್ ಬಾಸ್ 6ನೇ ಆವೃತ್ತಿ ಅಕ್ಟೋಬರ್ 21ರಂದು ಆರಂಭವಾಗಲಿದೆ. ಕಳೆದ ಐದು ಸೀಸನ್​ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಕಿಚ್ಚ ಸುದೀಪ್ ಮತ್ತೊಮ್ಮೆ ಬಿಗ್ ಬಾಸ್ ಆಗಲು ರೆಡಿಯಾಗಿದ್ದಾರೆ.. ಈ ಸೀಸನ್ನಿನ ಪ್ರೊಮೊಗಳು ಅದಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಸಂಚಲನ ಸೃಷ್ಟಿಸಿದೆ.

 

 

ಇಂಥಾ ಬಿಗ್ ಬಾಸ್ ಮನೆಗೆ ಈ ಭಾರಿ ಅವರು ಹೋಗ್ತಾರಂತೆ, ಇವರು ಹೋಗ್ತಾರಂತೆ ಎಂಬಂತ ರೂಮರುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕಾಪಟ್ಟೆ ಹರಿದಾಡುತ್ತಿದ್ದಾವೆ. ಆದರೆ ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿರುವ ಸ್ಪರ್ಧಿಗಳ ಪಟ್ಟಿ ಗೊತ್ತಾಗಿದ್ದು ಆ EXCLUSIVE ಡೀಟೈಲ್ಸ್ ಇಲ್ಲಿದೆ. ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.

ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆಯಲಿರುವ ಸಂಭಾವ್ಯರ ಹೆಸರು.
ಭಾವನಾ (ನಟಿ), ಕುರಿ ಪ್ರತಾಪ್ (ಹಾಸ್ಯ ನಟ), ಹೇಮಲತಾ (ನಿರೂಪಕಿ) ,ನವೀನ್ ಕೃಷ್ಣ (ನಟ), ಶಾಲಿನಿ ಗೌಡ ( ಟಕಿಲಾ ಖ್ಯಾತಿಯ ನಟಿ), ಪ್ರೇಮಕುಮಾರಿ (ಶಾಸಕ ರಾಮದಾಸ್ ನನ್ನ ಗಂಡ ಅಂತ ಹೇಳಿದಾಕೆ) , ಮುರಳಿ (ಒಗ್ಗರಣೆ ಡಬ್ಬಿ ಖ್ಯಾತಿಯ),ರಂಜಿನಿ (ಪುಟ್ಟಗೌರಿ ಖ್ಯಾತಿಯ) , ವಿಜಯಲಕ್ಷ್ಮಿ (ನಟಿ), ಗಡ್ಡಪ್ಪ (ತಿಥಿ ಸಿನಿಮಾ ಖ್ಯಾತಿಯ), ಸುಮನ್ ರಂಗನಾಥ್ (ನಟಿಯ), ಕಾವ್ಯ ಗೌಡ (ನಟಿ) ,ನವೀನ್ ಸಜ್ಜು (ಸಿಂಗರ್)

ಒಂದಷ್ಟು ಮನರಂಜನೆಯ ಜೊತೆಗೆ ಸ್ಪರ್ಧಿಗಳ ನಡುವಿನ ರಂಪಾಟ, ಸಣ್ಣತನ, ಕಿರಿಕ್ಕುಗಳೇ ಜೀವಾಳವಾಗಿರೋ ಈ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಜನರಿಗೆ ತಕರಾರಿದೆ. ಇದು ನಮ್ಮ ಕನ್ನಡ ನೆಲಕ್ಕೆ ಒಗ್ಗದ ಕಾನ್ಸೆಪ್ಟ್ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿರುತ್ತದೆ. ಇಂಥ ನೂರೆಂಟು ತಾತ್ಸಾರದ ಮಾತುಗಳ ನಡುವೆಯೂ ಬರೋಬ್ಬರಿ ಐದು ಸೀಸನ್ನುಗಳನ್ನು ಮುಗಿಸಿರುವ ಬಿಗ್ ಬಾಸ್ ಇದೀಗ ಆರನೇ ಬಾರಿಗೆ ಕನ್ನಡ ಪ್ರೇಕ್ಷಕರ ಬಳಿಗೆ ಲಗ್ಗೆಯಿಡುತ್ತಿದೆ..ಈ ಮೂಲಕ ಎಲ್ಲೋ ಒಂದಿಷ್ಟು ಮಂದಿ ಪ್ರತಿಭಾವಂತರು, ರಿಟೇರ್‍ಮೆಂಟ್ ಸ್ಟೇಜಿನ ಕಲಾವಿದರು ಮತ್ತು ಕೆಲವೊಂದಷ್ಟು ತಿಕ್ಕಲುತಾಣಗಳು, ಅಸಹ್ಯಕಾರಿ ಸಣ್ಣತನಗಳನ್ನು ಮತ್ತೊಮ್ಮೆ ನೋಡೋ ಕಾಲ ಬರುತ್ತಿದೆ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top