fbpx
ಸಮಾಚಾರ

“ನಾನು ಮಹಿಳೆಯಾಗಿ ಹುಟ್ಟಿದ್ದಕ್ಕೆ ಇಂದು ಸಾರ್ಥಕವಾಯಿತು”- ಸುಪ್ರೀಂ ತೀರ್ಪಿಗೆ ಜಯಮಾಲಾ ಪ್ರತಿಕ್ರಿಯೆ

ಕೇರಳದ ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೂ ಪ್ರವೇಶ ಕಲ್ಪಿಸಬೇಕು ಎಂದು ಕೋರಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ. ಸುಪ್ರೀಂಕೋರ್ಟ್ ಸಿಜೆ ದೀಪಕ್ ಮಿಶ್ರಾ ಅವರಿದ್ದ ಪಂಚ ಸದಸ್ಯ ಪೀಠ “ಕೇರಳದ ಶಬರಿಮಲೆಯ ಅಯ್ಯಪ್ಪನ ದೇವಸ್ಥಾನವನ್ನು ಎಲ ವಯೋಮಿತಿಯ ಮಹಿಳೆಯರು ಪ್ರವೇಶಿಸಬಹುದು” ಎಂಬ ಮಹತ್ವದ ತೀರ್ಪನ್ನು ನೀಡಿದೆ. ಈ ತೀರ್ಪಿಗೆ ಹಿರಿಯ ನಟಿ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖಾ ಸಚಿವೆ ಜಯಮಾಲಾ ಪ್ರತಿಕ್ರಿಯಿಸಿದ್ದಾರೆ.

“ನಾನು ಮಹಿಳೆಯಾಗಿ ಹುಟ್ಟಿದ್ದಕ್ಕೆ ಇಂದು ಸಾರ್ಥಕವಾಯಿತು ಇದಕ್ಕಿಂತ ಸಂತೋಷ ಬೇರೊಂದಿಲ್ಲ. ಇದೊಂದು ಐತಿಹಾಸಿಕ ದಿನ,. ಅಂಬೇಡ್ಕರ್ ಕೊಟ್ಟ ಸಂವಿಧಾನಕ್ಕೆ ನಾವು ಚಿರಋಣಿ, ಹಿಂದಿನ ಘಟನೆಯಿಂದ ನನಗೆ ಮಾತ್ರವಲ್ಲ ಇಡೀ ಹೆಣ್ಣು ಕುಲಕ್ಕೇ ನೋವಾಗಿತ್ತು. ಸುಪ್ರೀಂ ಕೋರ್ಟು ತೀರ್ಪು ಈ ಎಲ್ಲಾ ನೋವನ್ನು ಮರೆಸಿದೆ. ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಗಂಡು, ಹೆಣ್ಣು ಇಬ್ಬರೂ ಸಮಾನರೆನ್ನುವ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದರು.

ಈ ಹಿಂದೆ ನಟಿ ಜಯಮಾಲ ಅವರು ಅಯ್ಯಪ್ಪಸ್ವಾಮಿ ಗರ್ಭಗುಡಿ ಪ್ರವೇಶಿಸಿ ಪಾದ ಸ್ಪರ್ಶ ಮಾಡಿದ್ದೆ ಎಂದು ಹೇಳಿ ದೇಗುಲ ಸಮಿತಿ ಹಾಗೂ ಕೇರಳದ ಭಕ್ತರ ಕೋಪಕ್ಕೆ ತುತ್ತಾಗಿದ್ದರು..ದೇವಸ್ಥಾನ ಪ್ರವೇಸಿಸುವ ಮೂಲಕ ರಾಜ್ಯದ ಜನರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪದ ಮೇಲೆ ಪೊಲೀಸರು ನಟಿ ಜಯಮಾಲಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕೊನೆಗೆ ಜಯಮಾಲಾ ಅವರನ್ನು ನಿರ್ದೋಷಿ ಎಂದು ಕೋರ್ಟ್ ಘೋಷಿಸಿತ್ತು

ಇಂದಿನ ಸುಪ್ರೀಂ ತೀರ್ಪಿನಲ್ಲೇನಿದೆ?
ಶಬರಿಮಲೆ ಅಯ್ಯಪ್ಪ ಸನ್ನಿದಿಗೆ ಮಹಿಳೆಯರು ಪ್ರವೇಶಿಸಬಾರದು ಎಂಬ 800 ವರ್ಷಗಳ ಹಳೆಯ ಪದ್ಧತಿಯನ್ನು ಪ್ರಶ್ನಿಸಿ ಭಾರತೀಯ ಯುವ ವಕೀಲರ ಸಂಘಟನೆ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆಗಸ್ಟ್‌ನಲ್ಲಿ ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ವಿಚಾರಣೆ ವೇಳೆ ಸಂವಿಧಾನದ ಪ್ರಕಾರ ಪುರುಷರಂತೆ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸುವ ಅಧಿಕಾರವಿದೆ. ನಿಯಮಗಳನ್ನು ರೂಪಿಸಿ ಇದನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದೀಗ ಅಯ್ಯಪ್ಪನ ಸನ್ನಿದಿಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

“ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು.. ಶಬರಿಮಲೆ ದೇಗುಲದಲ್ಲಿ ದೇವರ ಆರಾಧನೆಗೆ ಎಲ್ಲರಿಗೂ ಸಮಾನವಾದ ಅಧಿಕಾರವಿದೆ. ಹೀಗಿದ್ದಾಗ ಯಾವ ಆಧಾರದಲ್ಲಿ ಮಹಿಳೆಯರ ಪ್ರವೇಶ ನಿಷೇಧಿಸುತ್ತೀರಿ. ಈ ನಡೆ ಸಂವಿಧಾನ ವಿರೋಧಿ. ಜನ ಸಾಮಾನ್ಯರಿಗೆ ದೇಗುಲ ತೆರೆದಾಗ ಅಲ್ಲಿಗೆ ಎಲ್ಲರೂ ಹೋಗುವಂತಾಗಬೇಕು. ದೇವಸ್ಥಾನ ಎನ್ನುವುದು ಯಾವತ್ತೂ ಖಾಸಗಿ ಸ್ವತ್ತಲ್ಲ. ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಆಸ್ತಿಗೆ ಯಾರಿಗೆ ಯಾವಾಗ ಬೇಕಾದರೂ ಪ್ರವೇಶ ಮಾಡಬಹುದು ಎಂದು ಹೇಳಿದೆ.” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top