ಸಮಾಚಾರ

ದೇಶಾದ್ಯಂತ ಸುದ್ದಿಯಾಗಿದ್ದ ವಿಜ್ಞಾನಿ ನಂಬಿ ನಾರಾಯಣ್‍ಗೆ ಕೇರಳ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ

ಸುಳ್ಳು ಆರೋಪದಡಿಯಲ್ಲಿ ಇಸ್ರೋದ ವಿಜ್ಞಾನಿಯಾಗಿದ್ದ ನಂಬಿ ನಾರಾಯಣ್ ಅವರನ್ನು ಬಂಧಿಸಿದ್ದಕ್ಕಾಗಿ ಕೇರಳ ಸರ್ಕಾರ ರೂ. 50 ಲಕ್ಷ ಪರಿಹಾರ ನೀಡಲು ಕೇರಳ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.. ಅವರ ಬಂಧನ ಅನಗತ್ಯ ಎಂದು ಅಭಿಪ್ರಾಯ ಪಟ್ಟಿದ್ದ ಸುಪ್ರೀಂ ಕೋರ್ಟ್ ನಂಬಿ ನಾರಾಯಣ್ ಅವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೇರಳ ಸರ್ಕಾರಕ್ಕೆ ಆದೇಶ ನೀಡಿತ್ತು ಈ ಹಿನ್ನಲೆಯಲ್ಲಿ ನಂಬಿಯಾರ್ ಅವರಿಗೆ ಪರಿಹಾರ ನೀಡಲಾಗುತ್ತಿದೆ.

 

 

ಇಸ್ರೋ ಗೂಢಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರೆಂದು ವಿಜ್ಞಾನಿ ನಂಬಿ ನಾರಾಯಣ್ ವಿರುದ್ಧ ಕಥೆ ಕಟ್ಟಿದ್ದ ಕೇರಳ ಪೋಲೀಸರು ಅವರನ್ನು 24 ವರ್ಷಗಳ ಕಾಲ ಬಂಧಿಸಿದ್ದರು. ಇಸ್ರೋದ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುತ್ತಿದ್ದಾಗ ಈ ತಂತ್ರಜ್ಞಾನವನ್ನು ನಂಬಿ ನಾರಾಯಣನ್ ಪಾಕಿಸ್ತಾನಕ್ಕೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜೈಲಿನಲ್ಲಿ ಅವರಿಗೆ ವಿಪರೀತ ಚಿತ್ರಹಿಂಸೆ ನೀಡಲಾಗಿತ್ತು. ಈ ವೇಳೆ ಇಸ್ರೋದ ಹಲವಾರು ಯೋಜನೆಗಳೂ ಕೂಡ ನೆನೆಗುದಿಗೆ ಬಿದ್ದಿತ್ತಲ್ಲದೆ, ಇಸ್ರೋ ವಿಜ್ಞಾನಿಗಳ ನೈತಿಕ ಸ್ಥೈರ್ಯವೇ ಉಡುಗಿ ಹೋಗಿತ್ತು.

ಈ ಸಂಬಂಧ 1994ರ ನವೆಂಬರ್ 30 ರಂದು ಕೇರಳ ಪೊಲೀಸರು ನಂಬಿ ನಾರಾಯಣನ್ ಅವರನ್ನು ಬಂಧಿಸಿದ್ದರು. ನಂತರ ಸಿಬಿಐ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬೇಹುಗಾರಿಕೆ ನಡೆದಿಲ್ಲ ಎಂದು ಸಿಬಿಐ ಹೇಳಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅವರ ಬಂಧನ ಅನಗತ್ಯವಾಗಿತ್ತು ಎಂದು ಹೇಳಿಕೆ ನೀಡಿತ್ತು.

70ರ ದಶಕದಲ್ಲೇ ಭಾರತದ ರಾಕೆಟ್ ತಂತ್ರಜ್ಞಾನದಲ್ಲಿ ‘ವಿಕಾಸ್​ ಎಂಜಿನ್​’ ಅನ್ನು ವಿನ್ಯಾಸಗೊಳಿಸಿದ ಕೀರ್ತಿ ನಂಬಿ ಅವರಿಗೆ ಸಲ್ಲುತ್ತದೆ. ಭಾರತ ಬಾಹ್ಯಕಾಶ ತಂತ್ರಜ್ಞಾನದಲ್ಲಿ ಸೂಪರ್ ಪವರ್​ ಆಗಬೇಕೆಂದು ಅವರು ಹಂಬಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top