ಮನೋರಂಜನೆ

ಅಂಬಿ ಅಣ್ಣನ ಕಷ್ಟ ನೋಡಿ ಬೇಜಾರಾಯ್ತು -ಯಶ್ ಹೀಗೆ ಹೇಳಿದ್ದು ಯಾಕೆ ಗೊತ್ತಾ?

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಮುಖ್ಯಭೂಮಿಕೆಯಲ್ಲಿರುವ ಕಾರಣಕ್ಕೆ ಆರಂಭಕ್ಕೂ ಮುಂಚೆಯೇ ಸಾಕಷ್ಟು ಹೆಸರು ಮಾಡಿದ್ದ ಚಿತ್ರ `ಅಂಬಿ ನಿಂಗ್ ವಯಸ್ಸಾಯ್ತೋ’. ಬಹು ವರ್ಷಗಳ ನಂತರ ರೆಬೆಲ್ ಸ್ಟಾರ್ ಅಂಬರೀಷ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಕಳೆದ ಗುರುವಾರವಷ್ಟೇ ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ರಿಲೀಸ್ ಆಗಿದೆ.

ಈಗಾಗಲೇ ಎಲ್ಲಾ ಕಡೆ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿರುವ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರವನ್ನು ಕೇವಲ ರೆಬೆಲ್ ಸ್ಟಾರ್ ಅಭಿಮಾನಿಗಳು ಮಾತ್ರವಲ್ಲದೇ ಚಿತ್ರರಂಗದವರು ಕೂಡ ನೋಡಿ ಮೆಚ್ಚಿಕೊಂಡಿದ್ದಾರೆ. ಅಂತೆಯೇ​ ಯಶ್​ ಮತ್ತು ರಾಧಿಕಾ ಪಂಡಿತ್​ ಕೂಡ ‘ಅಂಬಿ’ ಸಿನಿಮಾವನ್ನು ನೋಡಿ ಎಂಜಾಯ್ ಮಾಡಿದ್ದು ಅಂಬಿ ಸಿನಿಮಾಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ..

ಸಿನಿಮಾ ನೋಡಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ” ಅಂಬಿ ನಿಂಗ್ ವಯಸ್ಸಾಯ್ತೋ’ ಒಂದು ಪರಿಪೂರ್ಣ ಸಿನಿಮಾ. ಎಲ್ಲರ ಮನಸಿಗೂ ತುಂಬಾ ಹತ್ತಿರವಾದ ಸಬ್ಜೆಕ್ಟ್ ಅನ್ನು ನಿರ್ದೇಶಕರು ಬಹಳ ಚನ್ನಾಗಿ ಮೂಡಿಸಿದ್ದಾರೆ.. ಕೆಲವು ದೃಶ್ಯಗಳಲ್ಲಿ ಅಂಬಿಯಣ್ಣ ಕಷ್ಟ ಪಡೋದು ನೋಡಿ ಬೇಜಾರಾಯ್ತು, ಸುದೀಪ್ ಅವರೂ ಕೂಡ ಜೂನಿಯರ್ ಅಂಬಿ ಪಾತ್ರವನ್ನ ಅದ್ಭುತವಾಗಿ ಮಾಡಿದ್ದಾರೆ, ಶ್ರುತಿಹರಿಹರನ್ ಮತ್ತು ಸುಹಾಸಿನಿ ಮೇಡಂ ಕೂಡ ಅಚ್ಚುಕಟ್ಟಾಗಿ ಪಾತ್ರಗಳನ್ನ ನಿರ್ವಹಿಸಿದ್ದಾರೆ.. ಒಟ್ಟಾರೆ ನನಗೆ ಸಿನಿಮಾ ತುಂಬಾನೇ ಇಷ್ಟವಾಯ್ತು.,” ಎಂದು ಹೇಳಿದ್ದಾರೆ.

 

 

ಅಂದಹಾಗೆ ಕಿಚ್ಚ ಕ್ರಿಯೇಶನ್ಸ್ ಅರ್ಪಿಸಿ, ಕೆ.ಎಸ್.ಕೆ. ಶೋ ರೀಲ್ ಪ್ರೊಡಕ್ಷನ್ ಅಡಿಯಲ್ಲಿ ತಯಾರಾಗುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಕಿಚ್ಚನ ಶಿಷ್ಯ ಗುರುದತ್ ಗಾಣಿಗ ಎಂಬ 26ರ ಪೋರ ನಿರ್ದೇಶಿಸಿದ್ದಾನೆ. ಈ ಚಿತ್ರವನ್ನು ಕಿಚ್ಚ ಸುದೀಪ್ ಮತ್ತು ಮಂಜುನಾಥ್ ಗೌಡ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಬರುವ ಅಂಬಿಯವರ ಪ್ಲಾಶ್ ಬ್ಯಾಕ್ ಸನ್ನಿವೇಶದಲ್ಲಿ ಸುದೀಪ್ ಗೆ ಜೋಡಿಯಾಗಿ ಅಂದ್ರೆ ಸುಹಾಸಿನಿಯವರ ಯವ್ವನದ ಪಾತ್ರದಲ್ಲಿ ಶ್ರುತಿ ಹರಿಹರನ್ ನಟಿಸುತ್ತಿದ್ದಾರೆ. ಈ ಚಿತ್ರ ತಮಿಳಿನಲ್ಲಿ ಸೂಪರ್ ಹಿಟ್ಟಾಗಿದ್ದ ಪವರ್ ಪಾಂಡಿ ಚಿತ್ರದ ರೀಮೇಕ್. ಆದರೆ ಒಟ್ಟಾರೆ ಕಥೆ ಮತ್ತು ಸನ್ನಿವೇಷಗಳನ್ನು ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ಗುರುದತ್ ದೃಷ್ಯ ಕಟ್ಟಿದ್ದಾರೇ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top