fbpx
ಸಮಾಚಾರ

ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರೆ ನೀಡಿದ ಕಾಂಗ್ರೆಸ್ ಪಕ್ಷ.

ವಿಭಜನಕಾರಿ ರಾಜಕೀಯ ಮತ್ತು ದ್ವೇಷ, ಚರ್ಚೆ-ವಿರೋಧದ ದನಿ ಅಡಗಿಸುವಿಕೆಯಂತಹ ಕೃತ್ಯಗಳಲ್ಲಿ ತೊಡಗಿರುವ ಮತ್ತು ಹಿಂಸೆಯ ಸಿದ್ಧಾಂತ ಅನುಸರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಕರೆ ನೀಡಿದೆ., ಗಾಂಧೀಜಿಯವರ ಹುಟ್ಟುಹಬ್ಬದ ಅಂಗವಾಗಿ ವಾರ್ಧಾದ ಸೇವಾಗ್ರಾಮ ಆಶ್ರಮದ ಮಹಾದೇವ ಭವನದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಆರಂಭವಾದ ಕಾರ್ಯಕಾರಿಣಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ..

 

 

‘ಮಹಾತ್ಮಾ ಗಾಂಧೀಜಿ ಅವರ ಹತ್ಯೆಗೆ ದ್ವೇಷ ಮತ್ತು ಹಿಂಸೆ ಕಾರಣವಾಗಿತ್ತು. ಈಗ ಇದೇ ದ್ವೇಷ ಮತ್ತು ಹಿಂಸೆಯನ್ನು ಮೋದಿ ಸರ್ಕಾರ ಪ್ರಚುರಪಡಿಸುತ್ತಿದ್ದು, ಅದರ ವಿರುದ್ಧ 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ’ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. 1942ರಲ್ಲಿ ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ಇದೇ ಆಶ್ರಮದಲ್ಲಿ ನಡೆದಿದ್ದ ಕಾಂಗ್ರೆಸ್‌ ಸಭೆಯಲ್ಲಿ ಗಾಂಧಿಜಿ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ (ಕ್ವಿಟ್‌ ಇಂಡಿಯಾ) ಚಳವಳಿಯ ಘೋಷಣೆ ಮೊಳಗಿಸಿದ್ದರು. 75 ವರ್ಷಗಳ ಬಳಿಕ, ಗಾಂಧಿ ಜಯಂತಿಯಂದೇ, ಇದೇ ಸ್ಥಳದಲ್ಲಿ ಮೋದಿ ಸರಕಾರದ ವಿರುದ್ಧ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ “ಮೋದಿ ಸರ್ಕಾರವು ಭಾರತದ ಬಹುತ್ವ ಮತ್ತು ಪ್ರಜಾಪ್ರಭುತ್ವದ ವಿರುದ್ಧವಾಗಿದೆ. ಕೇವಲ ದ್ವೇಷ, ದ್ರೋಹ ಹಾಗೂ ಸುಳ್ಳುಗಾರಿಕೆಯ ರಾಜಕೀಯದಲ್ಲಿ ತೊಡಗಿದೆ. ಗಾಂಧೀಜಿ ಬಗ್ಗೆ ಭಾಷಣದಲ್ಲಿ ಮಾತಾಡೋದು ಸುಲಭ. ಅದು ಕೇವಲ ರಾಜಕೀಯ ಅವಕಾಶವಾದಿತನ. ಮೋದಿ ಅವರು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ’ ಎಂದೂ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top