ಸಮಾಚಾರ

ವಿಶ್ವಸಂಸ್ಥೆಯ ‘ಚಾಂಪಿಯನ್ಸ್ ಆಫ್‌ ದ ಅರ್ಥ್‌ ಪ್ರಶಸ್ತಿ’ ಸ್ವೀಕರಿಸಿದ ನರೇಂದ್ರ ಮೋದಿ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಚಾಂಪಿಯನ್ಸ್‌ ಆಫ್‌ ದಿ ಅರ್ಥ್‌ ಅವಾರ್ಡ್’ ಪ್ರದಾನ ಮಾಡಲಾಗಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್‌ ಮೋದಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

 

 

ನಂತರ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಗುಟರ್ರೆಸ್‌, ಹಮಾಮಾನದ ವೈಪರೀತ್ಯವು ಹೇಗೆ ನಮ್ಮ ಮೇಲೆ ನೇರ ಪರಿಣಾಮವನ್ನುಂಟು ಮಾಡುತ್ತದೆ ಎನ್ನುವುದನ್ನು ಮೋದಿ ಅವರು ಅರಿತಿದ್ದಾರೆ. ಅದರಿಂದುಂಟಾಗುವ ದುರಂತವನ್ನು ತಪ್ಪಿಸಲು ನಾವು ಏನು ಮಾಡಬೇಕು ಎನ್ನುವುದು ಅವರಿಗೆ ತಿಳಿದಿದೆ. ನಮ್ಮ ಕಾಲದ ಕೆಲವೊಂದು ಗಂಭೀರ ಪರಿಸರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಿರತ ಶ್ರಮವನ್ನು ಧೈರ್ಯದಿಂದ ನಡೆಸುತ್ತಿರುವವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಭಾರತದಲ್ಲಿ 2022ರ ವೇಳೆಗೆ ಪ್ಲಾಸ್ಟಿಕ್‌ ಬಳಕೆ ನಿರ್ಮೂಲನೆಗಾಗಿ ಕೈಗೊಂಡಿರುವ ಕ್ರಮಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸೌರಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿನ ನಾಯಕತ್ವವನ್ನು ಪರಿಗಣಿಸಿ ಪ್ರಧಾನಿ ಮೋದಿ ಅವರಿಗೆ ಈ ಪುರಸ್ಕಾರ ನೀಡುತ್ತಿರುವುದಾಗಿ ವಿಶ್ವಸಂಸ್ಥೆ ಹೇಳಿದೆ. ಇನ್ನು ಮೋದಿಯನ್ನು ಹೊರತುಪಡಿಸಿ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುವೆಲ್‌ ಮ್ಯಾಕ್ರಾನ್‌ ಅವರಿಗೂ ಕೂಡ ವಿಶ್ವಸಂಸ್ಥೆಯ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top