ಸಮಾಚಾರ

ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಹುದ್ದೆಯಿಂದ ಗೇಟ್‌ಪಾಸ್‌? ಸ್ಪಷ್ಟನೆ ನೀಡಿದ ರಮ್ಯಾ.

ಎಐಸಿಸಿ ಸಾಮಾಜಿಕ ಮಾಧ್ಯಮ ಘಟಕದ ಮುಖ್ಯಸ್ಥ ಸ್ಥಾನದಿಂದ ಮಾಜಿ ಸಂಸದೆ ರಮ್ಯಾ ಅವರಿಗೆ ಗೇಟ್ ಪಾಸ್ ನೀಡಲಾಗಿದೆ ಎಬ ಸುದ್ದಿ ಮಧ್ಯಾಹ್ನದಿಂದ ಹರಿದಾಡಿತ್ತಲ್ಲಾ, ಆ ಬಗ್ಗೆ ಇದೀಗ ಸ್ವತಃ ರಮ್ಯಾ ಅವರೇ ಸ್ಪಷ್ಟನೆ ನೀಡಿದ್ದು ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. “ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಸ್ಥಾನದಿಂದ ನನ್ನನ್ನು ತೆಗೆದು ಹಾಕಿಲ್ಲ ಹಾಗೆಯೆ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಿಲ್ಲ. ಇದು ಕೇವಲ ಸುಳ್ಳು ಸುದ್ದಿ” ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ.

 

 

ಸದ್ಯ ನಾನು ರಜೆಯಲ್ಲಿದ್ದೇನೆ. ನಾಳೆಯೇ ನವದೆಹಲಿಗೆ ಹಾಜರಾಗಿ ಪಕ್ಷದ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುತ್ತೇನೆ . ನಾನು ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ,, ನಾನ್ಯಾಕೆ ರಾಜೀನಾಮೆ ನೀಡಬೇಕು? ಟ್ವಿಟರ್​ ಖಾತೆಯಲ್ಲಿ ಕೆಲವು ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಲು ಸಮಸ್ಯೆ ಉಂಟಾಗಿತ್ತು. ಹಾಗಾಗಿ ಕಳೆದ ಮೂರು ದಿನ ಟ್ವೀಟ್ ಮಾಡಿರಲಿಲ್ಲವಷ್ಟೆ” ಎಂದು ರಮ್ಯಾ ಹೇಳಿದ್ದಾರೆ.

ಕಳೆದ 3 ದಿನಗಳಿಂದ ಅವರ ಟ್ವೀಟರ್‌ ಖಾತೆಯಿಂದ ಯಾವುದೇ ಟ್ವೀಟನ್ನು ಮಾಡಿಲ್ಲ. ಅಷ್ಟೇ ಅಲ್ಲದೇ ತಮ್ಮ ಟ್ವಿಟರ್ ಹಾಗೂ ಫೇಸ್ ಬುಕ್ ಖಾತೆಯಲ್ಲಿ ಇಂದು ಬೆಳಿಗ್ಗೆಯಿಂದ ತಮ್ಮ ಬಯೋಡೆಟಾ ಡಿಲೀಟ್ ಆಗಿತ್ತು ಹಾಗಾಗಿ ಅವರನ್ನು ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಹುದ್ದೆಯಿಂದ ಕಾಂಗ್ರೆಸ್ ಪಕ್ಷ ಕೈಬಿಟ್ಟಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಸುದ್ದಿ ಸುಳ್ಳು ಎಂದು ಈಗ ರಮ್ಯಾ ಅವರೇ ಬಹಿರಂಗಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top