ಮನೋರಂಜನೆ

ಕಿಚ್ಚನ ‘ಮದಕರಿ ನಾಯಕ’ ಸಿನಿಮಾ ಬಗ್ಗೆ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದೇನು?

“ನಾನು ಕೂಡ ಮದಕರಿ ನಾಯಕನ ಜೀವನಾಧಾರಿತ ಸಿನಿಮಾ ಮಾಡುತ್ತಿದ್ದೇನೆ” ಎಂದು ಕಿಚ್ಚಾ ಸುದೀಪ್ ಅವರು ಇಂದು ಬೆಳಿಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು.. ಈಗಾಗಲೇ ದರ್ಶನ್ ಅವರ ಮುಖ್ಯ ಭೂಮಿಕೆಯಲ್ಲಿ ‘ಗಂಡುಗಲಿ ಮದಕರಿ ನಾಯಕ’ ಎಂಬ ಸಿನಿಮಾ ಮಾಡುತ್ತಿರುವ ರಾಕ್ ಲೈನ್ ವೆಂಕಟೇಶ್ ಈ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಅವರು ಕೂಡ ಮದಕರಿ ನಾಯಕ ಸಿನಿಮಾ ಮಾಡುವುದಾಗಿ ಘೋಷಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಕ್ ಲೈನ್ ವೆಂಕಟೇಶ್ “ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ನಾವಿಬ್ಬರೂ ಬೇರೆ ಬೇರೆ ಸಿನಿಮಾ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು..

 

 

“ಇಬ್ಬರು ಮದಕರಿ ನಾಯಕನ ಕತೆ ಬಂದರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಏಕೆಂದರೆ ಇತಿಹಾಸದಲ್ಲಿ 13 ವೀರ ಮದಕರಿ ಪಾಳೇಗಾರರಿದ್ದಾರೆ. 13 ಪಾಳೇಗಾರರಿದ್ದು ಬೇರೆ ಬೇರೆ ವೀರ ಮದಕರಿ ನಾಯಕನ ಪಾತ್ರವನ್ನು ಮಾಡಬಹುದು. ನಾನು ಕೊನೆಯ ಪಾಳೇಗಾರನ ಕತೆಯನ್ನು ಸಿನಿಮಾ ಮಾಡುತ್ತಿದ್ದೇನೆ. ಈ ಎರಡು ಚಿತ್ರ ಚೆನ್ನಾಗಿ ಯಶಸ್ಸು ಕಾಣಲಿ. ನನ್ನ ಹಾಗೂ ಸುದೀಪ್ ಭಾಂದವ್ಯ ಚೆನ್ನಾಗಿದೆ. ಹಾಗಾಗಿ ನಾವಿಬ್ಬರು ನಮ್ಮ ಚಿತ್ರದ ಕತೆಗಳ ಬಗ್ಗೆ ಮಾತನಾಡಿ ಸಿನಿಮಾ ಮಾಡುತ್ತೇವೆ ಎಂದು ರಾಕ್‍ಲೈನ್ ವೆಂಕಟೇಶ್ ಖಾಸಗಿ ಸುದ್ದಿವಾಹಿನಿಯೊಂದಿಗೆ ಹೇಳಿದ್ದಾರೆ.

ರಾಕ್‌ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ದರ್ಶನ್ ಅಭಿನಯದ ‘ಗಂಡುಗಲಿ ಮದಕರಿ ನಾಯಕ’ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಾರೆಂಬ ಸುದ್ದಿಯಿದೆ. ಈ ಚಿತ್ರ 2019ರ ಜನವರಿ 15 ರಂದು ಸೆಟ್ಟೇರಲಿದೆ. ‘ಗಂಡುಗಲಿ ಮದಕರಿ ನಾಯಕ’ ಬಿಎಲ್ ವೇಣು ಅವರೇ ಬರೆದಿರುವ ಕಾದಂಬರಿಯಾಗಿದ್ದು, ಇದಕ್ಕೆ ಅವರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ದರ್ಶನ್ ಅವರನ್ನೇ ಮನಸ್ಸಿನಲ್ಲಿಟ್ಟುಕೊಂಡು ಮದಕರಿ ನಾಯಕನಿಗೆ ಸಂಭಾಷಣೆ ಬರೆಯುತ್ತಿದ್ದಾರೆ ಬಿ ಎಲ್ ವೇಣು..

ಸದ್ಯ ಸುದೀಪ್​ ಅಭಿನಯದ ದಿ ವಿಲನ್​ ಸಿನಿಮಾ ರಿಲೀಸ್​ ಆಗಬೇಕಿದ್ದು ಪೈಲ್ವಾನ್​, ಕೋಟಿಗೊಬ್ಬ-3 ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ಟಾಲಿವುಡ್​ನಲ್ಲಿ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ಕೂಡ ಕಿಚ್ಚ ಬ್ಯುಸಿಯಾಗಿದ್ದಾರೆ. ಈ ಎಲ್ಲಾ ಸಿನಿಮಾಗಳು ಮುಗಿದ ನಂತರವಷ್ಟೇ ‘ದುರ್ಗದ ಹುಲಿ’ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top