fbpx
ಮನೋರಂಜನೆ

“ವೀರ ಮದಕರಿ ಸಿನಿಮಾ ಮಾಡಿಯೇ ತೀರುತ್ತೇನೆ.” ಕಿಚ್ಚ ಸುದೀಪ್ ಸ್ಪಷ್ಟನೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ‘ಗಂಡುಗಲಿ ಮದಕರಿನಾಯಕ’ ಎಂಬ ಚಿತ್ರ ಸೆಟ್ಟೇರಲಿದೆ ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿಸದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ. ಇತ್ತ ಸುದೀಪ್ ಕೂಡ ಮದಕರಿ ನಾಯಕನ ಜೀವನಾಧಾರಿತ ಸಿನಿಮಾವನ್ನು ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ‘ದುರ್ಗದ ಹುಲಿ’ ಎಂಬ ಶೀರ್ಷಿಕೆಯಲ್ಲಿ ಸುದೀಪ್ ಅವರು ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಬಂದಿತ್ತು. ಇದೀಗ ಈ ಎಲ್ಲಾ ಸುದ್ದಿಗಳಿಗೂ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿದ್ದಾರೆ..

 

 

ಇದೇ ಮೊದಲಬಾರಿಗೆ ವೀರ ಮದಕರಿನಾಯಕ ಸಿನಿಮಾ ಮಾಡುವ ಬಗ್ಗೆ ಕಿಚ್ಚಾ ಸುದೀಪ್ ಅವರು ಅಧಿಕೃತವಾಗಿ ತಿಳಿಯಪಡಿಸಿದ್ದು ತಮ್ಮ ಟ್ವಿಟರ್ ಖಾತೆಯಲ್ಲಿ ಸವಿಸ್ತಾರವಾದ ಪತ್ರದ ಮೂಲಕ ಬಹಿರಂಗಪಡಿಸಿದ್ದಾರೆ. ಈ ಮೂಲಕ “ನಾನು ಕೂಡ ಮದಕರಿ ನಾಯಕ ಪಾತ್ರದಲ್ಲಿ ಮಾಡಿಯೇ ತೀರುತ್ತೇನೆ” ಎಂದು ಕಿಚ್ಚ ಹೇಳಿದ್ದಾರೆ. ಅಂದಹಾಗೆ ಸುದೀಪ್ ಬರೆದಿರುವ ಪತ್ರದ ಯಥಾವತ್ತು ರೂಪ ಈ ರೀತಿ ಇದೆ ನೋಡಿ.

ವೀರ ಮದಕರಿ ನಾಯಕನ ಸಿನಿಮಾ ನಿರ್ಮಾಣದ ಕುರಿತಂತೆ ನನ್ನ ಕೆಲವು ಅಭಿಪ್ರಾಯಗಳು

“ನಾನು ನನ್ನ ತಂಡ ಹಾಗೂ ಕೆಲವು ಲೇಖಕರ ಬಳಗವು ಈಗ್ಗೆ ಒಂದು–ಒಂದೂವರೆ ವರ್ಷದಿಂದ ‘ವೀರ ಮದಕರಿ ನಾಯಕ‘ ಸಿನಿಮಾ ನಿರ್ಮಾಣದ ದಿಸೆಯಲ್ಲಿ ಕೆಲಸ ಮಾಡುತ್ತಿದೇವೆ. ಈಗಾಗಲೇ ಒಂದಷ್ಟು ಸಂಶೋಧನೆ ಮತ್ತೂ ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ.

ವೀರ ಮದಕರಿ ಸಿನಿಮಾ ಮಾಡುವ ನಮ್ಮ ಆಲೋಚನೆ ವರ್ಷಗಳ ಹಿಂದೆಯೇ ಹುಟ್ಟಿದಂತಹುದು. ಆದರೆ, ಈ ದಿಸೆಯಲ್ಲಿ ಕೆಲಸ ಮಾಡಲು ಒಂದಷ್ಟು ಸಮಯ ಬೇಕಾಯಿತು. ಹೀಗಾಗಿ ಈ ಸಿನೆಮಾ ನಿರ್ದೇಶನ ಕೂಡ ಮಾಡುವ ಸ್ಫೂರ್ತಿ ಚಿಗುರೊಡೆಸಿತ್ತು.

ಇತ್ತೀಚೆಗೆ ಇದೇ ಕಥೆಯ ಆಧಾರಿತ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎಂಬ ಸುದ್ದಿ ನನಗೆ ನಿಜಕ್ಕೂ ಆಶ್ಚರ್ಯ ಉಂಟು ಮಾಡಿತು. ಸಹಜವಾಗಿಯೇ ನನಗೆ ಇದರಲ್ಲಿ ಏನಿದೆ ಎಂಬ ಪ್ರಶ್ನೆ ಹುಟ್ಟು ಹಾಕಿತು. ಯಾರೇ ಆಗಲೀ, ಇತಿಹಾಸದ ವಿಷಯಗಳ ಮೇಲೆ ಸಿನಿಮಾ ನಿರ್ಮಿಸಲು ಅರ್ಹರಿದ್ದಾರೆ.

ಒಂದೇ ವಿಷಯ, ಒಬ್ಬನೇ ವ್ಯಕ್ತಿಯ ಮೇಲೆ ಈಗಾಗಲೇ ಒಂದಕ್ಕಿಂತ ಹೆಚ್ಚು ಸಿನಿಮಾಗಳು ತೆರೆಕಂಡ ಉದಾಹರಣೆಗಳಿವೆ. ನಾನೊಬ್ಬನೇ ಮದಕರಿ ನಾಯಕನ ಪಾತ್ರ ನಿರ್ವಹಿಸಬೇಕು ಎಂಬುದು ಎಷ್ಟು ಸರಿ? ಆತ ಕರ್ನಾಟಕದ ವೀರಪುತ್ರ. ಅವರ ಬಗ್ಗೆ ಸಿನೆಮಾ ಯಾರಾದರೂ ಮಾಡಬಹುದು.

ರಾಕ್‌ಲೈನ್‌ ವೆಂಕಟೇಶ್‌ ಅವರ ಸಿನಿಮಾ ಆಸಕ್ತಿ ಅದ್ವಿತೀಯವಾದದ್ದು. ಇದನ್ನೊಂದು ಅತ್ಯುತ್ತಮ ಚಿತ್ರವಾಗಿ ತೆರೆಯ ಮೇಲೆ ತರುತ್ತಾರೆ ಎಂಬುದಕ್ಕೆ ಅನುಮಾನವೇ ಇಲ್ಲ. ರಾಜೇಂದ್ರ ಸಿಂಗ್‌ ಬಾಬು ಅವರ ಅನುಭವ ಕೂಡಾ ಇದರಲ್ಲಿ ಸಮ್ಮಿಲನವಾಗಿದೆ.

ಆದರೆ, ನಾನು ಮತ್ತು ನನ್ನ ತಂಡವು ಮಾಡ ಹೊರಟಿರುವ ಚಿತ್ರಕ್ಕೆ ಇದು ಅಡ್ಡಿಯಾಗುವುದಿಲ್ಲ. ಇದು ನಮ್ಮ ಕನಸೂ ಕೂಡಾ. ಇದು ಬರೀ ನನ್ನೊಬ್ಬನ ಕನಸಲ್ಲ. ಇಡೀ ತಂಡದ ಕನಸನ್ನು ನಾನು ಭಗ್ನಗೊಳಿಸಲು ಇಚ್ಛಿಸುವುದಿಲ್ಲ. ಇದರ ಬದಲಿಗೆ ಮಾಡಿ ಮಡಿಯುವುದೇ ಮೇಲು. ನಾನೂ ಒಬ್ಬ ಮದಕರಿ!

ರಾಕ್‌ಲೈನ್‌ ಅವರ ತಂಡವನ್ನು ನಾನು ಇಂತಹ ಒಳ್ಳೆಯ ಕರ್ನಾಟಕದ ನೆಲದ ಕಥೆಯನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದಿಸುತ್ತೇನೆ. ಅವರಿಗೆ ನನ್ನ ಶುಭಾಶಯಗಳು.

ಅದೇ ರೀತಿಯಾಗಿ ನನ್ನ ನಿರ್ಣಯವನ್ನು ನೀವೆಲ್ಲರೂ ಸಮ್ಮತಿಸುತ್ತೀರೆಂದು ನಂಬಿರುವೆ.”

ನಿಮ್ಮವ,
ಕಿಚ್ಚ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top