ಸಮಾಚಾರ

ಕಳೆದ ವಾರವಷ್ಟೇ ಆಯ್ಕೆಯಾಗಿದ್ದ ಬಿಬಿಎಂಪಿ ಉಪಮೇಯರ್ ವಿಧಿವಶ.

ಕಳೆದ ವಾರವಷ್ಟೇ ಬಿಬಿಎಂಪಿಯ ಉಪಮೇಯರ್ ಆಗಿ ಆಯ್ಕೆಯಾಗಿದ್ದ 44 ವರ್ಷ ವಯಸ್ಸಿನ ರಮೀಳಾ ಉಮಾಶಂಕರ್ ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ತಡ ರಾತ್ರಿ 12:45ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾವೇರಿಪುರ ವಾರ್ಡ್‌ ಕಾರ್ಪೊರೇಟರ್‌ ಆಗಿದ್ದ ರಮೀಳಾ, ಸೆಪ್ಟೆಂಬರ್‌ 28ರಂದು ಜೆಡಿಎಸ್‌ನಿಂದ ಉಪಮೇಯರ್‌ ಸ್ಥಾನಕ್ಕೆ ಆಯ್ಕೆಯಾಗಿದ್ದರು. ತಡ ರಾತ್ರಿ 12ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಪಶ್ಚಿಮ ಕಾರ್ಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

 

 

ಕಿತ್ತನಹಳ್ಳಿಯಲ್ಲಿರುವ ಹೌಸಿಂಗ್ ಬೋರ್ಡ್‍ನಲ್ಲಿ ರಮೀಳಾ ಉಮಾಶಂಕರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದ್ದು, ಸದ್ಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಮೀಳಾ ಉಮಾಶಂಕರ್ ನಿಧನ ಹಿನ್ನೆಲೆ ಬಿಬಿಎಂಪಿಗೆ ರಜೆ ಘೋಷಣೆ ಮಾಡಲಾಗಿದೆ.

ಬಿಬಿಎಂಪಿ ಉಪ ‌ಮೇಯರ್ ರಮೀಳಾ ಉಮಾಶಂಕರ್‌ ಅವರ ನಿಧನದ ಸುದ್ದಿ ತಿಳಿದು ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ಅವರು ‘ನಮ್ಮ‌ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ ಎಂದು‌ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top