ಮನೋರಂಜನೆ

ಬಸ್ ಪ್ರಯಾಣಿಕರಿಗೊಂದು ಸಿಹಿ ಸುದ್ದಿ.

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ., ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಮೇಲೆ 2.50 ರೂಪಾಯಿ ಇಳಿಸಿದ ಪರಿಣಾಮ ಸದ್ಯಕ್ಕೆ KSRTC ಮತ್ತು BMTC ಬಸ್ ಪ್ರಯಾಣ ದರ ಹೆಚ್ಚಳ ಅನುಮಾನವಾಗಿದೆ.. ಬಸ್ ಪ್ರಯಾಣ ಟಿಕೆಟ್ ದರ ಹೆಚ್ಚಳ ಮಾಡದೇ ಇರಲು ಸರ್ಕಾರದ ನಿರ್ಧಾರ ಮಾಡಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಕೇಂದ್ರ ಸರ್ಕಾರ ಬೆಲೆ ಕಡಿಮೆ ಮಾಡಿದ್ದರೂ ಕುಮಾರಸ್ವಾಮಿ ರಾಜ್ಯದಲ್ಲಿ ತೈಲ ಬೆಲೆ ಇಳಿಕೆಯಾಗಲ್ಲ ಎಂದು ಹೇಳಿರುವುದು ಈಗಾಗಲೇ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈಗ ಪ್ರಯಾಣ ದರ ಹೆಚ್ಚಿಸಿದರೆ ಮತ್ತೆ ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ,

 

 

ಸಾರಿಗೆ ಸಂಸ್ಥೆಯ ಎಲ್ಲ ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರವನ್ನು ಶೇ 18ರಷ್ಟು ಹೆಚ್ಚಿಸುವ ಸಾರಿಗೆ ಇಲಾಖೆಯ ಪ್ರಸ್ತಾವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮುಂದಿತ್ತು ಈಗ ಕೇಂದ್ರ ಸರ್ಕಾರ 2.5 ರೂ. ತೈಲ ಬೆಲೆಯನ್ನು ಇಳಿಕೆ ಮಾಡಿದೆ. ಇದರಿಂದ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ತಾತ್ಕಾಲಿಕವಾಗಿ ತಡೆಯಲಾಗಿದೆ.

ಕೇಂದ್ರ ಸರ್ಕಾರ ನೆನ್ನೆ 1.50 ರೂಪಾಯಿ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ್ದು, ತೈಲ ಕಂಪನಿಗಳು 1 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದ್ದವು. ಹೀಗಾಗಿ ತೈಲ ಬೆಲೆಯಲ್ಲಿ ಒಟ್ಟು 2.50 ರೂ ಕಡಿತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top