ಮನೋರಂಜನೆ

‘ದಿ ವಿಲನ್’ ಸಿನಿಮಾ ಬಜೆಟ್ ಎಷ್ಟು ಗೊತ್ತಾ? ಪ್ರೊಡ್ಯೂಸರ್ ಹೇಳದಿದ್ದರೂ ಶಿವಣ್ಣ ಬಾಯಿಬಿಟ್ರು.

ಕನ್ನಡ ಚಿತ್ರರಂಗದಲ್ಲಿ ವಿಪರೀತ ಕ್ರೆಜ್ ಹುಟ್ಟುಹಾಕಿರುವ ‘ದಿ ವಿಲನ್’ ಚಿತ್ರ ಬಿಡುಗಡೆಯಾಗೋ ದಿನಾಂಕ ಪಕ್ಕಾ ಆಗಿದ್ದು ಅಕ್ಟೋಬರ್ ಹದಿನೆಂಟನೇ ತಾರೀಕಿನಂದು ತೆರೆಗೆ ಅಪ್ಪಳಿಸಲಿದೆ..ಸೆಟ್ಟೇರಿ ಎರಡು ವರ್ಷಗಳೇ ಕಳೆಯುತ್ತಾ ಬಂದಿದ್ದರೂ ಪ್ರೇಕ್ಷಕರ ವಲಯದಲ್ಲಿ ವಿಪರೀತ ಕುತೂಹಲ ಕ್ರಿಯೇಟ್ ಮೆಂಟೇನ್ ಮಾಡಿಕೊಂಡು ಬಂದಿರೋ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾ ಸುದೀಪ್ ಮತ್ತು ಶಿವಣ್ಣ ಒಟ್ಟಾಗಿ ನಟಿಸಿರುವುದರಿಂದ ಈ ಪಾಟಿ ಸಂಚಲನ ಸೃಷ್ಟಿಸುತ್ತಿದೆ.. ಈಗಾಗಲೇ ಬಿಡುಗಡೆಯಾಗಿರೋ ಟೀಸರ್ ಮತ್ತು ಮೂರು ಹಾಡುಗಳ ಅಬ್ಬರವನ್ನು ಕಂಡು ಇಡೀ ಗಾಂಧಿನಗರವೇ ಬೆಚ್ಚಿಬಿದ್ದಾರೆ.

 

 

ಇಂಥಾ ಬಹುನಿರೀಕ್ಷಿತ ‘ದಿ ವಿಲನ್’ ಸಿನಿಮಾ ತಯಾರಿಸಲು ತಗುಲಿದ ಖರ್ಚೆಷ್ಟು? ಈ ಒಂದು ಪ್ರಶ್ನೆಗೆ ಇಲ್ಲಿಯವರೆಗೂ ನಿರ್ಮಾಪಕರಾಗಲಿ, ನಿರ್ದೇಶಕರಾಗಲಿ ಸ್ಪಷ್ಟವಾದ ಉತ್ತರ ಹೇಳಿರಲಿಲ್ಲ. ಆದರೆ, ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಿನ ಮಧ್ಯೆ ಶಿವಣ್ಣ ‘ದಿ ವಿಲನ್’ ಬಜೆಟ್ ಬಗ್ಗೆ ಬಾಯಿಬಿಟ್ಟಿದ್ದಾರೆ, ‘ನಾನು 15 ಲಕ್ಷ ಸಿನಿಮಾದಲ್ಲಿ ಅಭಿನಯ ಮಾಡಿದ್ದೇನೆ ಹಾಗೂ ‘ದಿ ವಿಲನ್’ ಎಂಬ 35-40 ಕೋಟಿ ಸಿನಿಮಾದಲ್ಲೂ ನಟಿಸಿದ್ದೇನೆ” ಎಂದು ಶಿವಣ್ಣ ಹೇಳಿದರು.. ಈ ಮೂಲಕ ದಿ ವಿಲನ್ ಸಿನಿಮಾದ ಬಜೆಟ್ 35-40 ಕೋಟಿ ಎಂಬುದನ್ನು ಶಿವಣ್ಣನೇ ಬಹಿರಂಗಪಡಿಸಿದ್ದಾರೆ.

ಅಂದಹಾಗೆ ಸಿನಿಮಾದ ಅಡ್ವಾನ್ಸ್ ಬುಕಿಂಗ್ಸ್ ಅಕ್ಟೋಬರ್ 11ರಿಂದ ಆರಂಭಗೊಳ್ಳಲಿದೆ. ಚಿತ್ರ ಬಿಡುಗಡೆಯಾಗಲು ಎರಡು ವಾರಗಳು ಬಾಕಿ ಇದ್ದರೂ ಕೂಡಾ ಅಭಿಮಾನಿಗಳೆಲ್ಲ ಈಗಾಗಲೇ ತಯಾರಿ ಆರಂಭಿಸಿದ್ದಾರೆ. ಮುಖ್ಯವಾದ ಥೇಟರುಗಳು ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ‘ದಿ ವಿಲನ್’ ಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಲು ತಯಾರಿಗಳು ಭರದಿಂದ ಸಾಗುತ್ತಿವೆ. ಇದಕ್ಕಾಗಿ ಭಾರೀಗಾತ್ರದ ಕಟೌಟುಗಳೂ ಸೇರಿದಂತೆ ಡಿಫರೆಂಟಾದ ಬ್ಯಾನರುಗಳೂ ಸಿದ್ಧಗೊಳ್ಳುತ್ತಿವೆ.

ದಿ ವಿಲನ್ ಬಗ್ಗೆ ಹೇಳ್ಬೇಕಂದ್ರೆ ಚಿತ್ರದಲ್ಲಿ ಕಿಚ್ಚ ಸುದೀಪ್ ಮತ್ತು ಶಿವಣ್ಣನಿಗೆ ನಾಯಕಿಯಾಗಿ ಬ್ರಿಟಿಷ್ ಬ್ಯೂಟಿ ಆಮಿ ಜಾಕ್ಸನ್ ನಟಿಸುತ್ತಿದ್ದಾರೆ,,ಚಿತ್ರಕ್ಕೆ ಸಿ.ಮನೋಹರ್ ಬಂಡವಾಳ ಹಾಕಿದ್ದು ಅರ್ಜುನ್ಯ ಜನ್ಯರವರು ಸಂಗೀತ ಸಂಯೋಜನೆ ಮಾಡಿದ್ದಾರೆ…ಉಳಿದಂತೆ ಗಿರಿಗೌಡ ಅವರ ಕ್ಯಾಮರಾ ಕೈಚಳಕ ಚಿತ್ರಕ್ಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top