ಆರೋಗ್ಯ

ಮೊಳಕೆ ಕಾಳು ತಿಂದ್ರೆ ಈ ಐದು ಮುಖ್ಯ ಲಾಭ ಪಡ್ಕೊಬಹುದು .

ಮೊಳಕೆ ಕಾಳು ತಿಂದರೆ ಉಪಯೋಗಗಳು

 

 

 

ಮೊಳಕೆ ಕಾಳು ತಿಂದರೆ ಆರೋಗ್ಯಕ್ಕೆ ಉತ್ತಮ ಎಂದು ನಮಗೆ ಗೊತ್ತೇ . ಮೊಳಕೆ ಕಾಳು ಯಾವೆಲ್ಲಾ ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಉತ್ತಮ ಎನ್ನುವುದನ್ನು ನೋಡೋಣ ಬನ್ನಿ.

ಜೀರ್ಣಕ್ರಿಯೆಗೆ ಅನುಕೂಲ:ಅಜೀರ್ಣತೆಯ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಜೀವಸತ್ವಗಳು ಆಹಾರವನ್ನುಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

ರಕ್ತ ಪರಿಚಲನೆಗೆ ಸಹಕಾರಿ:ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ.ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟುಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

ಬೊಜ್ಜು ಕರಗಿಸಲು:ಬೊಜ್ಜನ್ನು ಕರಗಿಸಿ ದೇಹದ ತೂಕವನ್ನು ಇಳಿಸಲು ಡಯಟ್ ಮಾಡುವವರಮ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

ನಿಶ್ಯಕ್ತಿಯನ್ನು ಕಡಿಮೆಮಾಡುತ್ತದೆ:ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿಯಿದೆ. ರೋಗನಿರೋಧಕ ಶಕ್ತಿ ಇರುವುದರಿಂದ ನಿಶ್ಯಕ್ತಿಯನ್ನು ಕಡಿಮೆ ಮಾಡುತ್ತದೆ.

ಪುರುಷರಲ್ಲಿ ವೀರ್ಯಾಣುಗಳ ಹೆಚ್ಚಳ:ಮೊಳಕೆಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಪುರುಷರಲ್ಲಿ ವೀರ್ಯಾಣುಗಳ ಉತ್ಪತ್ತಿಯು ದ್ವಿಗುಣವಾಗುತ್ತದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top