ಮನೋರಂಜನೆ

ಅಂಬಿ ನಿಂಗ್ ವಯಸ್ಸಾಗಿಲ್ಲ ಅಂದ್ರು ಪವರ್ ಸ್ಟಾರ್- ಅಂಬಿ ಚಿತ್ರದಲ್ಲಿ ಪುನೀತ್ ಗೆ ಇಷ್ಟವಾಗಿದ್ದು ಏನು?

ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಮುಖ್ಯಭೂಮಿಕೆಯಲ್ಲಿರುವ ಕಾರಣಕ್ಕೆ ಆರಂಭಕ್ಕೂ ಮುಂಚೆಯೇ ಸಾಕಷ್ಟು ಹೆಸರು ಮಾಡಿದ್ದ ಚಿತ್ರ `ಅಂಬಿ ನಿಂಗ್ ವಯಸ್ಸಾಯ್ತೋ’. ಬಹು ವರ್ಷಗಳ ನಂತರ ರೆಬೆಲ್ ಸ್ಟಾರ್ ಅಂಬರೀಷ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಕಳೆದ ವಾರವಷ್ಟೇ ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.

 

 

ಈಗಾಗಲೇ ಎಲ್ಲಾ ಕಡೆ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ಳುತ್ತಿರುವ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರವನ್ನು ಕೇವಲ ರೆಬೆಲ್ ಸ್ಟಾರ್ ಅಭಿಮಾನಿಗಳು ಮಾತ್ರವಲ್ಲದೇ ಚಿತ್ರರಂಗದವರು ಕೂಡ ನೋಡಿ ಮೆಚ್ಚಿಕೊಂಡಿದ್ದಾರೆ. ಅಂತೆಯೇ​ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡ ‘ಅಂಬಿ’ ಸಿನಿಮಾವನ್ನು ನೋಡಿ ಎಂಜಾಯ್ ಮಾಡಿದ್ದು ಅಂಬಿ ಸಿನಿಮಾಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ..

ಸಿನಿಮಾ ಬಗ್ಗೆ ಮಾತನಾಡಿರುವ ಅಪ್ಪು “ಅಂಬಿ ನಿಂಗ್ ವಯಸ್ಸಯ್ತೋ ಕೇವಲ ಸಿನಿಮಾ ಟೈಟಲ್ ಮಾತ್ರ ಅವರಿಗೆ ವಯಸ್ಸಾಗಿಲ್ಲ,, ಸಿನಿಮಾ ತುಂಬಾ ಚೆನ್ನಾಗಿದೆ. ಅಂಬರೀಷ್ ಅವ್ರು ಅದ್ಭುತವಾಗಿ ನಟಿಸಿದ್ದಾರೆ. ಸೆಕೆಂಡ್ ಹಾಫ್ ನಲ್ಲಿ ಸುದೀಪ್ ಚಿತ್ರಕ್ಕೆ ಮತ್ತಷ್ಟು ಬಲ ಕೊಡುತ್ತಾರೆ.” ಎಂದು ಹೇಳಿದ್ದಾರೆ. ನಿರ್ದೇಶಕ ಗುರುದತ್ತ ಗಾಣಿಗ ಕಾರ್ಯವೈಖರಿಯನ್ನು ಮೆಚ್ಚಿಕೊಳ್ಳುತ್ತಲೇ ಇಂಥಾ ಚೆಂದದ ಚಿತ್ರವೊಂದನ್ನು ನಿರ್ಮಾಣ ಮಾಡಿರುವ ಜಾಕ್ ಮಂಜು ಅವರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಅಂದಹಾಗೆ ಕಿಚ್ಚ ಕ್ರಿಯೇಶನ್ಸ್ ಅರ್ಪಿಸಿ, ಕೆ.ಎಸ್.ಕೆ. ಶೋ ರೀಲ್ ಪ್ರೊಡಕ್ಷನ್ ಅಡಿಯಲ್ಲಿ ತಯಾರಾಗುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಕಿಚ್ಚನ ಶಿಷ್ಯ ಗುರುದತ್ ಗಾಣಿಗ ಎಂಬ 26ರ ಪೋರ ನಿರ್ದೇಶಿಸಿದ್ದಾನೆ. ಈ ಚಿತ್ರವನ್ನು ಕಿಚ್ಚ ಸುದೀಪ್ ಮತ್ತು ಮಂಜುನಾಥ್ ಗೌಡ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಬರುವ ಅಂಬಿಯವರ ಪ್ಲಾಶ್ ಬ್ಯಾಕ್ ಸನ್ನಿವೇಶದಲ್ಲಿ ಸುದೀಪ್ ಗೆ ಜೋಡಿಯಾಗಿ ಅಂದ್ರೆ ಸುಹಾಸಿನಿಯವರ ಯವ್ವನದ ಪಾತ್ರದಲ್ಲಿ ಶ್ರುತಿ ಹರಿಹರನ್ ನಟಿಸುತ್ತಿದ್ದಾರೆ. ಈ ಚಿತ್ರ ತಮಿಳಿನಲ್ಲಿ ಸೂಪರ್ ಹಿಟ್ಟಾಗಿದ್ದ ಪವರ್ ಪಾಂಡಿ ಚಿತ್ರದ ರೀಮೇಕ್. ಆದರೆ ಒಟ್ಟಾರೆ ಕಥೆ ಮತ್ತು ಸನ್ನಿವೇಷಗಳನ್ನು ಇಲ್ಲಿನ ನೇಟಿವಿಟಿಗೆ ಒಗ್ಗಿಸಿಕೊಂಡು ಗುರುದತ್ ದೃಷ್ಯ ಕಟ್ಟಿದ್ದಾರೇ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top