ಸಮಾಚಾರ

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ? ಯಾವ ಕ್ಷೇತ್ರ ಗೊತ್ತಾ?

ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಗುಸು ಗುಸು ಶುರುವಾಗಿದೆ. ಈ ಹಿಂದೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಗೆದ್ದ ರೀತಿಯಲ್ಲಿಯೇ ರಾಹುಲ್‌ ಗಾಂಧಿ ಅವರು ಕೂಡ ಕರ್ನಾಟಕದಿಂದಲೇ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು ಬೀದರ್‌ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದಾರೆ ಎನ್ನೋ ಮಾತು ದಟ್ಟವಾಗಿದೆ.

ಬೀದರ್ ನಲ್ಲಿ ರಾಹುಲ್ ಸ್ಪರ್ಧಿಸುತ್ತಾರೆ ಎಂಬ ಗುಸು ಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು, ‘’ರಾಹುಲ್‌ ಗಾಂಧಿ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು, ಅದು ಅವರಿಗೆ ಬಿಟ್ಟ ವಿಚಾರ. ಬೀದರ್‌ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಬಗ್ಗೆ ಈಗಲೇ ಹೇಳಲು ಆಗುವುದಿಲ್ಲ. ನಾನು ಹೇಳಕ್ಕಾಗಲ್ಲ’ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರ ಖಂಡ್ರೆ ಅವರನ್ನು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ನೀಡಿದ ಸಲುವಾಗಿ ರಾಹುಲ್‌ ಗಾಂಧಿ ಅವರನ್ನು ಅಭಿನಂದಿಸಲು ಆಗಸ್ಟ್ 13ರಂದು ‘ಜನಧ್ವನಿ’ ಸಮಾವೇಶವನ್ನು ಆಯೋಜಿಸಲಾಗಿತ್ತು ಅಂದು ಭರ್ಜರಿ ಭಾಷಣ ಮಾಡಿದ್ದರು. ಅಂದಿನಿಂದ ರಾಹುಲ್ ಅವ್ರು ಬೀದರ್ ನಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top