ಸಮಾಚಾರ

ಮೇಕೆದಾಟು ಯೋಜನೆಯ ಬಗ್ಗೆ ಕರ್ನಾಟಕದ ವಿರುದ್ಧ ಮತ್ತೆ ಕ್ಯಾತೆ ತೆಗೆದ ತಮಿಳುನಾಡು.

ನೀರಿನ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಕಿತಾಪತಿ ತೆಗೆಯುವುದು ತಮಿಳುನಾಡಿಗೆ ಹೊಸ ವಿಚಾರವೇನಲ್ಲ. ತಮಿಳುನಾಡು ಮತ್ತು ಕರ್ನಾಟಕದ ನಡುವೆ ಹೊತ್ತಿಕೊಂಡಿರುವ ಕಾವೇರಿ ಜಲವಿವಾದಕ್ಕೆ ಸುದೀರ್ಘವಾದೊಂದು ಇತಿಹಾಸವೇ ಇದೆ. ಪ್ರತೀ ವರ್ಷ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆಯೋದಾಗಲಿ, ಒಡಲನ್ನೇ ಕಾವೇರಿಯನ್ನು ಕಂಡು ಕನ್ನಡಿಗರು ಹೋರಾಟಕ್ಕಿಳಿಯೋದಾಗಲಿ ಹೊಸತಲ್ಲ. ಅಂತೆಯೇ ಮತ್ತೊಮ್ಮೆ ತಮಿಳುನಾಡು ಕ್ಯಾತೆ ತೆಗೆದಿದೆ.

ಮೂರು ದಿನಗಳ ಹಿಂದೆ ಸಿಎಂ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆ ಸಂಬಂಧ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅನುಮತಿ ನೀಡುವಂತೆ ಮನವಿ ಮಾಡಿದ್ದರಲ್ಲಾ ಆ ಬಗ್ಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮನವಿ ಮಾಡಿದ್ದಾರೆ.

 

 

ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿಯಾದ ಪಳನಿಸ್ವಾಮಿ, “ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡು ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಯೋಜನೆಗೆ ಅನುಮತಿ ನೀಡಬಾರದು” ಎಂದು ಮನವಿ ಮಾಡಿದ್ದಾರೆ..

ಗಡ್ಕರಿ ಹೇಳಿದ್ದೇನು?
ಮೇಕೆದಾಟು ಯೋಜನೆ ಆರಂಭಿಸಿದರೆ ತಪ್ಪೇನಿದೆ? ಕರ್ನಾಟಕ ಭೂಮಿ ಮುಳುಗಡೆಯಾಗುತ್ತದೆ ಹೊರತು ತಮಿಳುನಾಡು ಭೂಮಿ ಮುಳುಗಡೆಯಾಗುವುದಿಲ್ಲ. ನೂರಾರು ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹೋಗುವುದು ತಪ್ಪುತ್ತದೆ ಅಲ್ಲವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದರು ಎಂದು ಮೂಲಗಳು ತಿಳಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top