ಸಮಾಚಾರ

ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು- ಮತ್ತೊಂದು ಸಂಕಷ್ಟದಲ್ಲಿ ಸ್ಯಾಂಡಲ್‍ವುಡ್ ಕ್ವೀನ್.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ಹೊಂದುವ ಮೂಲಕ ಆನ್‌ಲೈನ್ ವಿಭಾಗವನ್ನು ನಿರ್ವಹಿಸುತ್ತಿರುವಾಕೆ ರಮ್ಯಾ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿಯೇ ಟ್ವೀಟ್ ಮಾಡುತ್ತಲೇ ಪದೇ ಪದೆ ಮೋದಿ ಅಭಿಮಾನಿಗಳನ್ನು ಕೆಣಕುತ್ತಾ ಸುದ್ದಿಯಾಗುತ್ತಿದ್ದ ರಮ್ಯಾ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ.

ಕಾಂಗ್ರೆಸ್ ಐಟಿ ಸೆಲ್’ನಲ್ಲಿ ಕೆಲಸ ಮಾಡುತಿದ್ದ ಮಹಿಳಾ ಸಿಬ್ಬಂದಿಗೆ ಐಟಿ ಸೆಲ್ ಸದಸ್ಯ ಪಟ್ನಾಯಕ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕೇಳಿಬಂದಿರುವ ಆರೋಪ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆಗೆ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ., ಸಂತ್ರಸ್ತೆ ಮಹಿಳೆ ಈಗ ರಮ್ಯಾ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ.

ದೂರು ಕೊಟ್ಟರೂ ಲೈಂಗಿಕ ಕಿರುಕುಳ ನೀಡಿದ್ದ ಪಟ್ನಾಯಕ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆದರೆ ರಮ್ಯಾ ಅವರು ನನ್ನನ್ನೇ ಸಾರ್ವಜನಿಕವಾಗಿ ಬೈದಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕ ಕಿರುಕುಳ ಕೊಟ್ಟ ಚಿರಾಗ್ ಪಟ್ನಾಯಕ್ ಪರವೇ ರಮ್ಯಾ ವಾದಿಸುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸುತ್ತಿದ್ದಾರೆ. ಮಹಿಳೆ ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಪ್ರಕರಣ ಸಂಭಂದಿಸಿದ ಚಾರ್ಜ್ ಶೀಟ್ ನಲ್ಲಿ ರಮ್ಯಾ ಹೆಸರು ಉಲ್ಲೇಖವಾಗಿದೆ.

“ಕೆಲಸದ ವೇಳೆ ಚಿರಾಗ್ ಪಾಟ್ನಾಯಕ್ ಎಂಬಾತ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆ ನಾಯಕ ತನ್ನ ಕಾಯಕ ಮಾಡಿಕೊಂಡಿದ್ದನು ಈ ಕುರಿತು ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನ ಮುಖ್ಯಸ್ಥೆ ದಿವ್ಯ ಸ್ಪಂದನ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top