ಸಮಾಚಾರ

ಪ್ರಧಾನಿ ಮೋದಿ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸುವ ವಿಚಾರ- ಯಡಿಯೂರಪ್ಪ ಹೇಳಿದ್ದೇನು?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಸ್ಪರ್ಧೆ ಊಹಾಪೋಹವಷ್ಟೇ. ಇಂಥ ಸುದ್ದಿಗಳಲ್ಲಿ ಯಾವುದೇ ಹುರುಳಿಲ್ಲ,” ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

 

 

ಸೋಮವಾರ ಬಿಎಸ್​ವೈ ಅವರ ನಿವಾಸದಲ್ಲಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಅಡಿದ ಅವರು “ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುವ ಸುದ್ದಿ ಸುಳ್ಳು. ಇದು ಕೇವಲ ಊಹಾಪೋಹವಷ್ಟೇ ” ಎಂದು ಸ್ಪಷ್ಟನೆ ನೀಡಿದರು.

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಮೋದಿ ಪ್ರಾಬಲ್ಯತೆ ಕಡಿಮೆ ಇದೆ. ಜೊತೆಗೆ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯಗಳಲ್ಲೂ ಗಟ್ಟಿ ನೆಲೆಯಿಲ್ಲ. ಈ ಕಾರಣಕ್ಕಾಗಿಯೇ ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಸೀಟ್​ಗಳನ್ನು ಗೆಲ್ಲಲು ಮೋದಿ – ಅಮಿತ್​ ಶಾ ಹೊಸ ತಂತ್ರ ಹೆಣೆದು ಮೋದಿಯನ್ನು ಕರ್ನಾಟಕದಿಂದ ಸ್ಪರ್ಧಿಸುವ ಪ್ಲಾನ್ ಮಾಡಲಾಗಿದೆ ಎಂದು ಹೇಳಲಾಗಿತ್ತು ಆದರೆ ಸದ್ಯ ಯಡಿಯೂರಪ್ಪ ಅವರ ಸ್ಪಷ್ಟನೆ ಬಳಿಕ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದು ಸತ್ಯಕ್ಕೆ ದೂರವಾದ ಮಾತು ಎಂಬುದು ಸಾಭೀತಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top