ಸಮಾಚಾರ

ಡಿಕೆಶಿ ವಿರುದ್ಧ ಸಲ್ಲಿಸಿದ್ದ ದೂರನ್ನು ಅಚ್ಚರಿದಾಯಕ ರೀತಿಯಲ್ಲಿ ಹಿಂಪಡೆದ ಬಿಬಿಎಂಪಿ ಅಧಿಕಾರಿ.

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರ ವಿರುದ್ಧ ದೂರು ದಾಖಲಿಸಿದ್ದ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್​ ತಾವು ನೀಡಿದ್ದ ದೂರನ್ನು ಆಶ್ಚರ್ಯಕರ ರೀತಿಯಲ್ಲಿ ಹಿಂಪಡೆದಿದ್ದಾರೆ.

ಹೈಕೋರ್ಟ್​ ಆದೇಶದಂತೆ ಅನಧಿಕೃತ ಜಾಹೀರಾತು ಫಲಕ ತೆರವು ಮಾಡದ ಹಿನ್ನೆಲೆಯಲ್ಲಿ ಪಂತರಪಾಳ್ಯ ಜಂಕ್ಷನ್ ಸಮೀಪದ ಸ್ಥಳದಲ್ಲಿ ಜಾಹೀರಾತು ಫಲಕ ಅಳವಡಿಕೆಗೆ ಬಳಸಿದ್ದ ಲೋಹದ ಚೌಕಟ್ಟು ತೆರವುಗೊಳಿಸಿಲ್ಲ ಎಂದು ಮುತ್ತುರಾಜ್​ ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ಆಧರಿಸಿ ಸಚಿವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಆದರೆ ದೂರು ದಾಖಲಿಸಿದ ಒಂದೇ ದಿನಕ್ಕೆ ಉಲ್ಟಾ ಹೊಡೆದಿರುವ ದೂರುದಾರ ಮುತ್ತರಾಜ್​ ಅವರು ದೂರನ್ನು ಹಿಂಪಡೆದಿದ್ದಾರೆ.

ಜಾಹೀರಾತು ಫಲಕ ಅಳವಡಿಕೆಗೆ ತೆರವುಗೊಳಿಸದ ಆರೋಪದ ಹಿನ್ನಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಅಧಿಕಾರಿಯು ಪ್ರಪ್ರಕರಣದಲ್ಲಿ ಶಿವಕುಮಾರ್ ಅವರದ್ದು ಯಾವುದೇ ತಪ್ಪಿಲ್ಲ. ಭೂ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಎಫ್ಐಆರ್ ದಾಖಲಾದ ಬಳಿಕ ಜಾಹೀರಾತನ್ನು ತೆಗೆದು ಹಾಕಲಾಗಿದೆ. ಹೀಗಾಗಿ ದೂರನ್ನು ಹಿಂದಕ್ಕೆ ಪಡೆದಿದ್ದೇನೆ. ಇತರೆ ಪ್ರಕರಣದಲ್ಲಿ ಮಾಡಿದಂತೆಯೇ ಮಾಡಿದ್ದೇವೇ ಎಂದು ಪೊಲೀಸರಿಗೆ ಮರು ಹೇಳಿಕೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top