ಮನೋರಂಜನೆ

ಈಗ ಅಧಿಕೃತ- ಕೆಜಿಎಫ್ ರಿಲೀಸ್ ಡೇಟ್ ಡಿಸೆಂಬರ್ 21ಕ್ಕೆ ಮುಂದೂಡಿಕೆ.

ಪ್ರೇಕ್ಷಕರ ವಲಯದಲ್ಲಿ ಭಾರಿ ಕುತೂಹಲ ಹುಟ್ಟುಹಾಕಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿತ್ತು. ನವೆಂಬರ್ 16ರಂದು ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಿಸಿತ್ತು.. “ಆದರೆ ಚಿತ್ರತಂಡ ಹೇಳಿರುವ ದಿನಾಂಕದಂದು ಕೆಜಿಎಫ್ ತೆರೆಕಾಣುತ್ತಿಲ್ಲ, ಚಿತ್ರದ ರಿಲೀಸ್ ಡೇಟ್ ಡಿಸೆಂಬರ್ ಮೂರನೇ ವಾರಕ್ಕೆ ಪೋಸ್ಟ್ ಫೋನ್ ಆಗಿದೆ

ಚಿತ್ರದ ಬಗ್ಗೆ ಯಶ್ ಅಭಿಮಾನಿಗಳು ಸೇರಿದಂತೆ ಸಿನಿರಸಿಕರೆಲ್ಲರಲ್ಲೂ ಭಯಂಕರ ನಿರೀಕ್ಷೆ ಮೂಡಿದೆ. ಅದ್ಧೂರಿ ಮೇಕಿಂಗ್, ಪೋಸ್ಟರ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವಂತಹ ಸ್ಟಿಲ್ಲುಗಳ ಮೂಲಕವೇ ಭಾರಿ ಸಂಚಲನ ಸೃಷ್ಟಿಸಿರುವ ಈ ಚಿತ್ರ ಎಬ್ಬಿಸಿರೋ ಅಲೆ ಕಂಡು ಬಹುತೇಕರು ಅಚ್ಚರಿಗೊಂಡಿದ್ದಾರೆ.. ಇಂಥಾ ಮಹೋನ್ನತ ಚಿತ್ರ ರಿಲೀಸ್ ಡೇಟ್ ಮುಂದಕ್ಕೆ ಹೋಗಿದ್ದು ಡಿಸೆಂಬರ್ 21ಕ್ಕೆ ತೆರೆ ಕಾಣುತ್ತಿದೆ.. ಹೀಗಂತ ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಿಸಿದೆ..

 

 

ಎಲ್ಲರಿಗೂ ಗೊತ್ತಿರೋ ಹಾಗೆ ಕೆಜಿಎಫ್ ಸಿನಿಮಾ ಬಹುಕೋಟಿ ವೆಚ್ಚದ ಸಿನಿಮಾ. ಸುಮಾರು 70ಕೋಟಿ ವೆಚ್ಚದಲ್ಲಿ ಈ ಸಿನಿಮಾ ತಯಾರಾಗಿದ್ದು ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ.. ಹಾಕಿರೋ ಬಂಡವಾಳ ವಾಪಸ್ಸು ಬರಬೇಕು ಅಂದ್ರೆ ಕೇವಲ ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ ಚಿತ್ರವನ್ನು ಬಿಡುಗಡೆ ಮಾಡಬೇಕು. ಆದರೆ ಚಿತ್ರತಂಡ ಘೋಷಿಸಿದ್ದ(ನವೆಂಬರ್ 16) ದಿನಾಂಕದಂದು ‘ಕೆಜಿಎಫ್’ ಗೆ ಹೊರ ರಾಜ್ಯಗಳಲ್ಲಿ ಥಿಯೇಟರ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ಸಿನಿಮಾವನ್ನು ಪೋಸ್ಟ್ ಫೋನ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ..

ಅಂದಹಾಗೆ ಚಿತ್ರದ ಟ್ರೈಲರ್ ರಿಲೀಸ್ ಕೂಡ ಮುಂದಕ್ಕೆ ಹೋಗಿದೆ ಎಂಬ ಸುದ್ದಿ ಇದ್ದು ಇದೂ ಕೂಡ ಅಧಿಕೃತ ಮಾಹಿತಿಯಲ್ಲ.. ಹೊಂಬಾಳೆ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೂ ಕೂಡಾ ಈ ಚಿತ್ರದ ಆಕರ್ಷಣೆಗಳಲ್ಲೊಂದು. ಇನ್ನುಳಿದಂತೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡುತ್ತಿದ್ದು ಭುವನ್ ಗೌಡ ಅವರ ಕ್ಯಾಮರಾ ಕೈಚಳಕ ಚಿತ್ರಕ್ಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top