ಮನೋರಂಜನೆ

ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ.

ಚಂದನವನದ ಮುದ್ದು ಜೋಡಿಗಳಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ರಾಗಿಣಿ ರಾಮಚಂದ್ರನ್ ಅವರದ್ದೂ ಒಂದು.. ಚಿತ್ರರಂಗದಲ್ಲಿ ಡೈನಾಮಿಕ್ ಪ್ರಿನ್ಸ್ ಎಂದೇ ಹೆಸರಾಗಿರುವ ಪ್ರಜ್ವಲ್ ರಾಗಿಣಿ ಚಂದ್ರನ್‌ರನ್ನು ವರಿಸಿ ವರ್ಷಗಳೇ ಕಳೆಯುತ್ತಾ ಬಂದಿವೆ.. ಈ ನಡುವೆ ಪ್ರಜ್ವಲ್ ಪತ್ನಿ ರಾಗಿಣಿ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನುವ ಸುದ್ದಿ ಆಗಾಗ್ಗೆ ಹರಿದಾಡುತ್ತಿತ್ತು. ಇದೀಗ ಈ ಸುದ್ದಿ ನಿಜವಾಗುತ್ತಿದೆ..

 

 

ಪ್ರಜ್ವಲ್ ನಾಯಕನಾಗಿ ನಟಿಸುತ್ತಿರುವ ಇನ್ಸ್ಪೆಕ್ಟರ್ ವಿಕ್ರಂ ಚಿತ್ರದ ಅತಿಥಿ ಪಾತ್ರವೊಂದರಲ್ಲಿ ರಾಗಿಣಿ ಕೂಡ ನಟಿಸುತ್ತಾರೆ ಎಂಬ ವಿಷಯ ಹೊರಬಿದ್ದ ಬೆನ್ನಲ್ಲೇ ಅವರು ಮತ್ತೊಂದು ಸಿನಿಮಾಗೆ ನಾಯಕಿಯಾಗುವ ಸುದ್ದಿ ಕೂಡ ಇದೀಗ ಬಹಿರಂಗಗೊಂಡಿದೆ. ಹೌದು ಪ್ರಜ್ವಲ್ ಪತ್ನಿ ರಾಗಿಣಿ ‘ವಿಜಯದಶಮಿ’ ಹೆಸರಿನ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ರಘು ಸಮರ್ಥ್ ನಿರ್ದೇಶಿಸುತ್ತಿರುವ ವಿಜಯದಶಮಿ ನಾಯಕಿ ಪ್ರದಾನ ಚಿತ್ರದಲ್ಲಿ ರಾಗಿಣಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಅಕ್ಟೋಬರ್ 19ಕ್ಕೆ ಅಂದರೆ ವಿಜಯದಶಮಿಯಂದೇ ಈ ಚಿತ್ರದ ಮುಹೂರ್ತ ನೆರವೇರಲಿದೆ. ಉಳಿದಂತೆ ಅಚ್ಯುತ್ ಕುಮಾರ್. ಅವಿನಾಶ್ ಸೇರಿದಂತೆ ಅನೇಕರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top