ಮನೋರಂಜನೆ

ಯುವತಿಯನ್ನು ಎಳೆದುಕೊಂಡು ಹೋಗಿ ಲೈಂಗಿಕ ಕಿರುಕುಳ ಕೊಟ್ಟಿದ್ದರಂತೆ ಕ್ರಿಕೆಟಿಗ ಲಸಿತ್ ಮಾಲಿಂಗ.

ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೊಡುವ ಆಮಿಷವೊಡ್ಡಿ ನಟಿಯರನ್ನು ಮಂಚಕ್ಕೆ ಆಹ್ವಾನಿಸುವ ಕಾಯಿಲೆ ಎಲ್ಲ ಚಿತ್ರರಂಗಗಳಿಗೂ ಸಾಂಕ್ರಾಮಿಕವಾಗಿ ಹರಡಿರೋ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಂಥ ಕಾಸ್ಟ್ ಕೌಚಿಂಗ್‌ನ ಸರಣಿ ಇದೀಗ ಎಲ್ಲೆಲ್ಲಿಯೋ ಬಿಚ್ಚಿಕೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ದೇಶವ್ಯಾಪಿ ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಇಂತಹ ಅನಿಷ್ಟ ಪಿಡುಗಿನ ವಿರುದ್ಧ ಭಾರತ ಚಿತ್ರರಂಗದ ಎಲ್ಲಾ ಭಾಷೆಯ ಪ್ರಸಿದ್ಧ ಯುವ ನಟಿಯರನೇಕರು ತಾವೇ ಅನುಭವಿಸಿದ್ದ ಕಾಸ್ಟಿಂಗ್ ಕೌಚ್ ಮನೋ ವ್ಯಾಕುಲವನ್ನು ಸಾಂದರ್ಭಿಕವಾಗಿ ಬಿಚ್ಚಿಡುತ್ತಿದ್ದಾರೆ..

ಇತ್ತೀಚಿಗೆ ಬಾಲಿವುಡ್ ನಟಿ ತನುಶ್ರೀ ದತ್ತಾ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಆರೋಪ ಮಾಡಿದೇಟಿಗೆ ಚಿತ್ರರಂಗದೊಳಗೆ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿ ಇಡೀ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಅದಾದೇಟಿಗೆ ಹಲವು ಚಿತ್ರರಂಗದ ನಟಿಯರೂ ಕೂಡ ಚಿತ್ರರಂಗದಲ್ಲಿ ತಮಗಾಗುತ್ತಿರುವ ಚಿತಾಹಿಂಸೆಯನ್ನು ಒಂದರ ಹಿಂದೊಂದರಂತೆ ಬಿಚ್ಚಿಡುತ್ತಾ ಬಂದಿದ್ದಾರೆ.. ಲೈಂಗಿಕ ಕಿರುಕುಳದ ವಿರುದ್ಧ Me Too ಅಭಿಯಾನ ಶುರುವಾಗಿದೆ..

 

 

ರಘು ದೀಕ್ಷಿತ್ ಹಾಗೂ ಖ್ಯಾತ ತಮಿಳು ಗೀತ ಸಾಹಿತಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಖ್ಯಾತ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಈಗ ಶ್ರೀಲಂಕಾ ಕ್ರಿಕೆಟಿಗ ಲಸಿತ್ ಮಾಲಿಂಗ ಅವರ ವಿರುದ್ಧವೂ ಧ್ವನಿ ಎತ್ತಿದ್ದಾರೆ. ಮೀ ಟೂ ಅಭಿಯಾನದಲ್ಲಿ ಶ್ರೀಪಾದ ಎಂಬ 34 ವರ್ಷದ ಮಹಿಳೆ, ಹೆಸರಾಂತ ಗಾಯಕಿ, ಮಾಲಿಂಗ ಪ್ರಕರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕೆಲವು ವರ್ಷಗಳ ಹಿಂದಿನ ಘಟನೆಯಿದು. ಆಗ ಮಾಲಿಂಗ ಮುಂಬೈ ಇಂಡಿಯನ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದರು. ಯುವತಿ ಯೊಬ್ಬಳು ಮುಂಬಯಿ ಹೊಟೇಲ್‌ನಲ್ಲಿ ತಂಗಿದ್ದಳು. ಆಕೆ ತನ್ನ ಗೆಳತಿ ಬರುವುದನ್ನು ಕಾಯುತ್ತಿದ್ದಳು. ಈ ವೇಳೆ ಬಂದ ಮಾಲಿಂಗ ನಿನ್ನ ಗೆಳತಿ ನನ್ನ ಕೊಠಡಿಯಲ್ಲಿದ್ದಾರೆ ಎಂದು ತಿಳಿಸಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಸಭ್ಯವಾಗಿ ವರ್ತಿಸಿದ್ದಾರೆ. ಸೆಲೆಬ್ರಿಟಿ ಎಂದು ನಂಬಿ ಆಕೆ ಹೋಗಿದ್ದಳು. ಆದರೆ ಮಾಲಿಂಗ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅಲ್ಲಿಂದ ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ ಎಂದು ಚಿನ್ಮಯಿ ಘಟನೆಯನ್ನು ವಿವರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top