ಸಮಾಚಾರ

ಎನ್.ಮಹೇಶ್ ರಾಜೀನಾಮೆ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ಅವರು ಗುರುವಾರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.”ನಾನು ಕೇವಲ ಸಚಿವ ಸ್ಥಾನಕ್ಕೆ ಮಾತ್ರ ರಾಜಿನಾಮೆ ನೀಡಿದ್ದೇನೆ. ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ನೀಡಿದ ಬೆಂಬಲ ಮುಂದುವರಿಸುತ್ತೇನೆ” ಎಂದು ಮಹೇಶ್ ಹೇಳಿದ್ದಾರೆ.

 

 

ತಮ್ಮ ಕ್ಷೇತ್ರಕ್ಕೆ ಹೆಚ್ಚು ಗಮನ ಹರಿಸಲು ಹಾಗೂ ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಮಹೇಶ್ ಅವರು ಹೇಳಿದ್ದಾರೆ. ಆದರೆ ವಾರದ ಹಿಂದೆಯೇ ಮಿತ್ರ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಮಹಿಳೆ ಅವರ ರಾಜಿನಾಮೆ ಪಡೆಯುವಂತೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿದ್ದರು ಎನ್ನಲಾಗಿದೆ.

ಬಿಎಸ್‍ಪಿ ನಾಯಕಿ ಮಾಯಾವತಿ ಅವರು ಮಹೇಶ್’ಗೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ವಾರದ ಹಿಂದೆಯೇ ಸೂಚಿಸಿದ್ದರಂತೆ. ಆದ್ರೆ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಹಿಂದೇಟು ಹಾಕಿದ್ದರು. ಮಹೇಶ್ ಅವರ ಈ ನಡೆ ಕಂಡಿದ್ದ ಮಾಯಾವತಿ, ನೇರವಾಗಿ ಸಿಎಂ ಕುಮಾರಸ್ವಾಮಿ ಜೊತೆ ಮಾತನಾಡಿದ್ದರು. ಮಹೇಶ್‍ರಿಂದ ರಾಜೀನಾಮೆ ಪಡೆಯಿರಿ ಇಲ್ಲವೆ ಸಂಪುಟದಿಂದ ಕೈಬಿಡಿ ಎಂದಿದ್ದರು.ಹೀಗಾಗಿ ಮಾಯಾವತಿ ಒತ್ತಡಕ್ಕೆ ಸಿಲುಕಿ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top