ಮನೋರಂಜನೆ

ಪಬ್ಲಿಸಿಟಿಗೋಸ್ಕರ ಲೈಂಗಿಕ ಕಿರುಕುಳದ ಆರೋಪ ಮಾಡಬಾರದು: #MeToo ಬಗ್ಗೆ ಮಾನ್ವಿತಾ ಹೀಗಂದ್ರು.

ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೊಡುವ ಆಮಿಷವೊಡ್ಡಿ ನಟಿಯರನ್ನು ಮಂಚಕ್ಕೆ ಆಹ್ವಾನಿಸುವ ಕಾಯಿಲೆ ಎಲ್ಲ ಚಿತ್ರರಂಗಗಳಿಗೂ ಸಾಂಕ್ರಾಮಿಕವಾಗಿ ಹರಡಿರೋ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಂಥ ಕಾಸ್ಟ್ ಕೌಚಿಂಗ್‌ನ ಸರಣಿ ಇದೀಗ ಎಲ್ಲೆಲ್ಲಿಯೋ ಬಿಚ್ಚಿಕೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ದೇಶವ್ಯಾಪಿ ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಇಂತಹ ಅನಿಷ್ಟ ಪಿಡುಗಿನ ವಿರುದ್ಧ ಭಾರತ ಚಿತ್ರರಂಗದ ಎಲ್ಲಾ ಭಾಷೆಯ ಪ್ರಸಿದ್ಧ ಯುವ ನಟಿಯರನೇಕರು ತಾವೇ ಅನುಭವಿಸಿದ್ದ ಕಾಸ್ಟಿಂಗ್ ಕೌಚ್ ಮನೋ ವ್ಯಾಕುಲವನ್ನು ಸಾಂದರ್ಭಿಕವಾಗಿ ಬಿಚ್ಚಿಡುತ್ತಿದ್ದಾರೆ..

ಇತ್ತೀಚಿಗೆ ಬಾಲಿವುಡ್ ನಟಿ ತನುಶ್ರೀ ದತ್ತಾ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಆರೋಪ ಮಾಡಿದೇಟಿಗೆ ಚಿತ್ರರಂಗದೊಳಗೆ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿ ಇಡೀ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಅದಾದೇಟಿಗೆ ಹಲವು ಚಿತ್ರರಂಗದ ನಟಿಯರೂ ಕೂಡ ಚಿತ್ರರಂಗದಲ್ಲಿ ತಮಗಾಗುತ್ತಿರುವ ಚಿತಾಹಿಂಸೆಯನ್ನು ಒಂದರ ಹಿಂದೊಂದರಂತೆ ಬಿಚ್ಚಿಡುತ್ತಾ ಬಂದಿದ್ದಾರೆ.. ಲೈಂಗಿಕ ಕಿರುಕುಳದ ವಿರುದ್ಧ Me Too ಅಭಿಯಾನ ಶುರುವಾಗಿದೆ..ಹಲವಾರು ನಟಿಯರು #MeToo ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಮೇಟೂ ಅಭಿಯಾನ ಆರಂಭವಾಗುತ್ತಿದ್ದಂತೆ ಲೈಂಗಿಕ ಕಿರುಕುಳದ ಆರೋಪಗಳು ಗಲ್ಲಿಗೊಂದರಂತೆ ಕೇಳಿಬಂದಿದ್ದವು. ಇದೀಗ ಇಂಥಾ ಆರೋಪಗಳ ಬಗ್ಗೆ ‘ಟಗರು ಪುಟ್ಟಿ’ ಮಾನ್ವಿತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಯಾರಿಗೆ ಲೈಂಗಿಕ ಕಿರುಕುಳ ಆಗಿದೆಯೋ ಅವರಿಗೆ ನ್ಯಾಯ ಸಿಗಬೇಕು, ಆದರೆ ಪಬ್ಲಿಸಿಟಿಗೋಸ್ಕರ ಸುಳ್ಳು ಆರೋಪ ಮಾಡುವುದು ತಪ್ಪು” ಎಂದು ಮಾನ್ವಿತಾ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top