fbpx
ಉಪಯುಕ್ತ ಮಾಹಿತಿ

ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಪಾನ್ ಕಾರ್ಡ್ ನಲ್ಲಿರುವ 10 ಸಂಖ್ಯೆಗಳು ಏನನ್ನು ಸೂಚಿಸುತ್ತೆ ಗೊತ್ತಾ

ನಾವೆಲ್ಲರೂ ತಿಳಿದಿರುವಂತೆ ಪಾನ್ ಕಾರ್ಡ್ ಎನ್ನುವುದು ಯಾವುದೇ ಒಂದು ಪ್ರಮುಖವಾದ ಗುರುತಿನ ಚೀಟಿಗಳಲ್ಲೊಂದು.ಆದಾಯ ತೆರಿಗೆ ಇಲಾಖೆ ಒದಗಿಸುವ ಶಾಶ್ವತ ಖಾತೆ ಸಂಖ್ಯೆ(ಪಾನ್)ಯು ಹೆಚ್ಚಿನ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವಾಗ ಕಡ್ಡಾಯವಾಗಿ ಬೇಕಾಗಿರುತ್ತದೆ.,ಇಂದು ಅನೇಕ ಸಂದರ್ಭಗಳಲ್ಲಿ ಪಾನ್ ಕಾರ್ಡ್ ಕಡ್ಡಾಯವಾಗಿದ್ದು, ಹತ್ತು ಅಂಕೆಗಳ ಶಾಶ್ವತ ಖಾತೆ ಸಂಖ್ಯೆ(PAN) ಅಥವಾ ಪಾನ್ ಕಾರ್ಡ್ ಆದಾಯ ತೆರಿಗೆ ಇಲಾಖೆ ಒದಗಿಸುತ್ತದೆ. ಅಷ್ಟೇ ಅಲ್ಲ ಇದನ್ನು ಗುರುತಿನ ದಾಖಲಾತಿಯಾಗಿ ಕೂಡ ಬಳಸಲಾಗುತ್ತದೆ.ಇತ್ತೀಚಿಕೆ ಬಹುತೇಕ ಎಲ್ಲಾ ಆರ್ಥಿಕ ಕೆಲಸಗಳಿಗೆ ಪಾನ್ ಕಾರ್ಡ್ ನಂಬರ್ ಕೇಳುವುದು ಮಾಮೂಲಿಯಾಗಿದೆ. ಅಸಲಿಗೆ ಈ ಪಾನ್ ಕಾರ್ಡ್ ಮಾಡಿಸೋದೇ ದೊಡ್ಡ ತಲೆನೋವು ಇದನ್ನು ಮಾಡಿಸಲು ಕೆಲವು ಅಗತ್ಯ ಡಾಕ್ಯುಮೆಂಟ್ ಗಳನ್ನೂ ನೀವು ಕೊಡ್ಲೇಬೇಕು ಅಂತ ಹೇಳೋದನ್ನು

ಪಾನ್ ಕಾರ್ಡ್ ಅಂದ್ರೆ ಏನು :ಭಾರತದ ಆದಾಯ ತೆರಿಗೆ ಇಲಾಖೆ ನೀಡುವ 10 ಅಂಕಿಗಳುಳ್ಳ ಪರ್ಮನೆಂಟ್ ಅಕೌಂಟ್ ನಂಬರ್ ಅನ್ನು ಸಂಕ್ಷಿಪ್ತವಾಗಿ ಪಾನ್ ಕಾರ್ಡ್ ಎಂದು ಕರೆಯಲಾಗುತ್ತದೆ. ಈ ಪಾನ್ ಕಾರ್ಡ್ ನಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಬೇರೆ ಬೇರೆ ಅಂಕೆಗಳನ್ನು ನೀಡಲಾಗಿರುತ್ತದೆ. ಇದೊಂದು ಶಾಶ್ವತ ನಂಬರ್ ಆಗಿದ್ದು, ಒಂದು ವೇಳೆ ನಿಮ್ಮ ವಿಳಾಸ ಬದಲಾವಣೆ ಆದರೂ ಸಹ ಯಾವುದೇ ಪರಿಣಾಮ ಬೀರುವುದಿಲ್ಲ.

 

 

 

ಪಾನ್ ಕಾರ್ಡ್ ನಲ್ಲಿನ 10 ಸಂಖ್ಯೆಗಳು ಏನನ್ನು ಸೂಚಿಸುತ್ತವೆ:ಪಾನ್ ಕಾರ್ಡಿನ ಮೊದಲ 5 ಇಂಗ್ಲೀಷಿನ ಅಕ್ಷರಗಳನ್ನು ಕೋರ್ ಗುಂಪುಗಳೆಂದು ಕರೆಯುತ್ತಾರೆ. ಇದರಲ್ಲಿನ ಮೊದಲನೇ 3 ಅಕ್ಷರಗಳು `ಎ’ ಇಂದ `ಝೆಡ್’ ವರೆಗೆ ಸಾಮಾನ್ಯವಾಗಿ ಇರುತ್ತವೆ. 4ನೇ ಅಕ್ಷರವು ಪಾನ್ ಕಾರ್ಡ್ ಯಾವುದಕ್ಕೆ ಸಂಬಂಧಪಟ್ಟಿದೆ ಎಂಬುದನ್ನು ತೋರಿಸುತ್ತದೆ. ಸಿ-ಕಂಪನಿ, ಪಿ- ವ್ಯಕ್ತಿ, ಎಚ್-ಹಿಂದೂ ಅವಿಭಕ್ತ ಕುಟುಂಬ, ಎಫ್- ವಿಭಾಗ, ಎ-ವ್ಯಕ್ತಿಗಳ ಗುಂಪು, ಟಿ-ಟ್ರಸ್ಟ್, ಬಿ-ವ್ಯಕ್ತಿಯ ಗುರುತು, ಎಲ್-ಸ್ಥಳೀಯ ಸಂಸ್ಥೆಗಳು, ಜೆ-ಕಾನೂನು ಪ್ರಕಾರ ವ್ಯಕ್ತಿ ಎಂದು ಪರಿಗಣಿಸಿರುವುದು, ಜಿ-ಸರ್ಕಾರ ಆಗಿರುತ್ತದೆ. ಅಲ್ಲದೇ 5ನೇ ಅಕ್ಷರ ವ್ಯಕ್ತಿಯ ಹೆಸರಿನ ಮೊದಲನೇ ಅಕ್ಷರವಾಗಿರುತ್ತದೆ. ಇದಲ್ಲದೇ 6 ರಿಂದ 9ನೇ ಸ್ಥಾನದಲ್ಲಿ ಬರುವ ಅಂಕಿಗಳು 0001 ರಿಂದ 9999ರವರೆಗಿನ ಸರಣಿ ಸಂಖ್ಯೆಗಳಾಗಿರುತ್ತವೆ. ಕೊನೆಯ ಇಂಗ್ಲೀಷಿನ ಸಂಖ್ಯೆ ಅಂಕಿಗಳನ್ನು ಪ್ರತಿನಿಧಿಸುವ ಅಕ್ಷರವಾಗಿರುತ್ತದೆ.

ಪಾನ್ ಕಾರ್ಡನ್ನು ಯಾರಿಗೂ ವರ್ಗಾಯಿಸಲು ಸಾಧ್ಯವಿಲ್ಲ. ಇದು ಯುನಿವರ್ಸಲ್ ಗುರುತಿನ ಚೀಟಿಯ ಹಾಗೆ ಕಾರ್ಯನಿರ್ವಹಿಸುತ್ತದೆ. ಆದಾಯ ತೆರಿಗೆ ಪಾವತಿ ಹಾಗೂ ಹಣಕಾಸು ವ್ಯವಹಾರಗಳು ಈ ಖಾತೆ ಸಂಖ್ಯೆಯ ಆಧಾರದ ಮೇಲೆಯೇ ನಡೆಯುತ್ತದೆ. ಸದ್ಯ ಪಾನ್ ಕಾರ್ಡ್ ಸಾಲ, ಬಂಡವಾಳ ಹೂಡಿಕೆ, ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಕಡ್ಡಾಯವಾಗಿ ಬೇಕಾಗಿದೆ.ಪಾನ್ ಕಾರ್ಡಿನ ಮೊದಲನೇ ಸಾಲಿನಲ್ಲಿ ವ್ಯಕ್ತಿಯ ಸಂಪೂರ್ಣ ಹೆಸರು, ಎರಡನೇ ಸಾಲಿನಲ್ಲಿ ಆಕೆಯ/ಆತನ ತಂದೆ ಹಾಗೂ ಪೋಷಕರ ಹೆಸರು. ಮೂರನೇ ಸಾಲಿನಲ್ಲಿ ಜನ್ಮದಿನಾಂಕ. ನಾಲ್ಕನೇ ಸಾಲಿನಲ್ಲಿ 10 ಅಂಕಿಗಳ ಪರ್ಮನೆಂಟ್ ಅಕೌಂಟ್ ನಂಬರ್ ಹಾಗೂ ಐದನೇ ಸಾಲಿನಲ್ಲಿ ಪಾನ್ ಕಾರ್ಡ್ ಅರ್ಜಿದಾರರ ಸಹಿ ಹಾಗೂ ಅವರ ಭಾವಚಿತ್ರ ಮುದ್ರಿತವಾಗಿರುತ್ತದೆ. ಇದಲ್ಲದೇ ಆದಾಯ ತೆರಿಗೆ ಇಲಾಖೆಯ ಹಾಲೋಗ್ರಾಮ್ ಸಹ ಇರುತ್ತದೆ. ಒಂದು ವೇಳೆ ಸಂಸ್ಥೆಗಳು ಪಾನ್ ಕಾರ್ಡ್ ಪಡೆದುಕೊಂಡಿದ್ದರೆ, ಅದರಲ್ಲಿ ಸಂಸ್ಥೆಯ ಹೆಸರು, ನೋಂದಣಿ ದಿನಾಂಕ ಹಾಗೂ ಇತರೆ ಮಾಹಿತಿಗಳು ಮುದ್ರಿತವಾಗಿರುತ್ತವೆ.

ಪಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾಗುವ ಡಾಕ್ಯುಮೆಂಟ್ಸ್:ಇತ್ತೀಚಿನ ಎರಡು ಪಾಸ್‍ಪೋರ್ಟ್ ಸೈಜಿನ ಭಾವಚಿತ್ರ ಹಾಗೂ ಎಸ್‍ಎಸ್‍ಎಲ್‍ಸಿ ಪ್ರಮಾಣ ಪತ್ರ, ನೋಂದಾಯಿತ ಶಿಕ್ಷಣ ಸಂಸ್ಥೆಯಿಂದ ಪದವಿ ಪ್ರಮಾಣ ಪತ್ರ, ಕ್ರೆಡಿಟ್ ಕಾರ್ಡ್, ಬ್ಯಾಂಕ್ ಸ್ಟೇಟ್ ಮೆಂಟ್, ರೇಶನ್ ಕಾರ್ಡ್, ಚಾಲನಾ ಪರವಾನಗಿ, ಮತದಾನ ಗುರುತಿನ ಚೀಟಿ, ಪಾಸ್ ಪೋರ್ಟ್ ಹಾಗೂ ಆಧಾರ್ ಕಾರ್ಡ್ ಗಳು ಬೇಕು. ಅಲ್ಲದೇ ಹೊಸ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸ ಬೇಕಾದರೆ ಈ ಮೇಲ್ಕಂಡ ಕನಿಷ್ಠ ಎರಡು ಗುರುತಿನ ಚೀಟಿ ಮತ್ತು ವಿಳಾಸ ದೃಢಿಕರಣವನ್ನು ಕಡ್ಡಾಯವಾಗಿ ನೀಡಲೇ ಬೇಕು.

 

 

 

ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ:ಪಾನ್ ಕಾರ್ಡ್ ಅನ್ನು ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದಾಗಿದೆ. ಇದರಲ್ಲಿ ವಯಸ್ಸು ಮತ್ತು ರಾಷ್ಟ್ರೀಯತೆ ಬರುವುದಿಲ್ಲ. ಒಂದು ವೇಳೆ ಮಕ್ಕಳ ಹೆಸರಿನಲ್ಲಿ ಪಾನ್ ಕಾರ್ಡ್ ಮಾಡಿಸಬೇಕಾದರೆ ಪೋಷಕರ ರುಜು ಕಡ್ಡಾಯವಾಗಿರುತ್ತದೆ. ಪಾನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಆದಾಯ ತೆರಿಗೆಯ ಜಾಲತಾಣ (www.tin-nsdl.com) ಹಾಗೂ ಆದಾಯ ತೆರಿಗೆ ಇಲಾಖೆ ನಿಗದಿಪಡಿಸಿದ ಸಂಸ್ಥೆಗಳ ಮೂಲಕ ಆನ್‍ಲೈನ್ ಅಥವಾ ಆಪ್‍ಲೈನ್ ಮೂಲಕ ಅರ್ಜಿಸಲ್ಲಿಸಬಹುದು.

ಪಾನ್ ಕಾರ್ಡ್ ಮಾಡಿಸುವುದರಿಂದ ಆಗುವ ಉಪಯೋಗ:ಪಾನ್ ಕಾರ್ಡ್ ನ್ನು ಬ್ಯಾಂಕ್ ಖಾತೆ ತೆರೆಯಲು, ಐಟಿ ರಿಟರ್ನ್ಸ್, ಆಸ್ತಿ ಮತ್ತು ವಾಹನ ಮಾರಾಟ ಹಾಗೂ ಖರೀದಿ ವೇಳೆ, ಷೇರು ಮತ್ತು ಮ್ಯೂಚುವಲ್ ಫಂಡ್‍ಗಳಲ್ಲಿ ಹಣ ಹೂಡಿಕೆ ಮಾಡುವ ವೇಳೆ ಹಾಗೂ ಇನ್ನೂ ಅನೇಕ ಸಂದರ್ಭದಲ್ಲಿ ಉಪಯೋಗ ಮಾಡಿಕೊಳ್ಳಬಹುದು. ಇದಲ್ಲದೇ ಪಾನ್ ಕಾರ್ಡನ್ನು ಗುರುತಿನ ಚೀಟಿಯಾಗಿರೂ ಸಹ ಬಳಕೆ ಮಾಡಬಹುದಾಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top