ಸಮಾಚಾರ

“ವಿಷ್ಣುವರ್ಧನ್ ಸ್ಮಾರಕ ಆಗಿಯೇ ತೀರಲಿದೆ, ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ” CM HDK

ಕಳೆದ ಹತ್ತು ವರ್ಷಗಳಿಂದಲೂ ಒಂದಿಲ್ಲೊಂದು ಕಾರಣದಿಂದ ನೆನೆಗುದಿಗೆ ಬಿದ್ದಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರ ಮತ್ತೆ ಸುದ್ದಿಗೆ ಗ್ರಾಸವಾಗುತ್ತಿದೆ. ನಟ ಅಂಬರೀಷ್ ಅವರ ಸಾವಿನ ಬೆನ್ನಲ್ಲೇ ಮತ್ತೆ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಚರ್ಚೆಗಳು ಆರಂಭವಾಗಿವೆ. ಸ್ವತಃ ವಿಷ್ಣು ವರ್ಧನ್ ಅವರ ಕುಟುಂಬ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಈ ನಡುವೆ ಎದ್ದಿರುವ ಸ್ಮಾರಕ ಕುರಿತಾದ ಚರ್ಚೆಗಳ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ “ವಿಷ್ಣುವರ್ಧನ್ ಸ್ಮಾರಕ ಆಗಿಯೇ ತೀರಲಿದೆ, ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ..

ಮೊನ್ನೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬರೀಷ್ ಗೆ ಪುಷ್ಮ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು “ನನಗೆ ಅಂಬರೀಷ್ ಹೇಗೋ, ವಿಷ್ಣುವರ್ಧನ್ ಅವರು ಕೂಡಾ ಹಾಗೆಯೇ.. ನಾನು ಕೂಡ ಅವರ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ.. ವಿಷ್ಣು ಸ್ಮಾರಕ ನಿರ್ಮಾಣ ಮಾಡುವುದಕ್ಕೆ ನಾನು ಬದ್ಧನಾಗಿದ್ದೇನೆ., ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ” ಎಂದು ಹೇಳಿದರು.

ಡಾ.ರಾಜ್‌ಕುಮಾರ್‌, ವಿಷ್ಣುವರ್ಧನ್‌ ಮತ್ತು ಅಂಬರೀಷ್‌ ಅವರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ಬದ್ಧನಿದ್ದೇನೆ’ ಎಂದು ಅವರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top