ಸಮಾಚಾರ

ಬಿಜೆಪಿ ಶಾಸಕ ರೇಣುಕಾಚಾರ್ಯ ಬಂಧನ- ಯಾಕೆ ಗೊತ್ತಾ?

ಹೊನ್ನಾಳಿ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ಅವರನ್ನು ಬಂಧಿಸಲಾಗಿದೆ. ಬಂದ್ ವೇಳೆ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ರೇಣುಕಾಚಾರ್ಯರನ್ನು ವಶಕ್ಕೆ ಪಡೆದಿದ್ದಾರೆ.

ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಪೊಲೀಸರು
ರೇಣುಕಾಚಾರ್ಯ ರನ್ನು ಬಂಧಿಸಿದ್ದಾರೆ.

ಬಂದ್ ವೇಳೆ ಶಾಸಕರು ರಸ್ತೆ ತಡೆ ನಡೆಸಿ, ಸಾರ್ವಜನಿಕರಿಗೆ ಕಿರುಕುಳ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆಗೂ ವಾಗ್ವಾದ ನಡೆಸಿದ್ದರು. ರೇಣುಕಾಚಾರ್ಯರ ವರ್ತನೆಗೆ ಬೇಸತ್ತ ಪೋಲಿಸರು. ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಾಸಕರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ರೇಣುಕಾಚಾರ್ಯ ಜೊತೆಗೆ ಇನ್ನೂ ಹತ್ತು ಜನರನ್ನು ಕೂಡ ಪೊಲೀಸರು ತುಂಬಿಕೊಂಡು ಹೋಗಿದ್ದಾರೆ.

ಸಮರ್ಪಕ ಮರಳು ಪೂರೈಕೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರ್ಪಡೆ, ಭತ್ತ-ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ, ರೈತರ ಸಂಪೂರ್ಣ ಸಾಲಮನ್ನಾ, ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಂಧ್ ಗೆ ಕರೆ ನೀಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top