ರಾಜಕೀಯ

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ – ಸಮನ್ವಯ ಸಮಿತಿಯಿಂದ ಮಹತ್ವದ ನಿರ್ಧಾರ

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ ಸಂಪುಟ ವಿಸ್ತರಣೆಯನ್ನು ಡಿಸೆಂಬರ್ 22 ಕ್ಕೆ ಮಾಡಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಗಿದ್ದು ಈ ವಿಚಾರವನ್ನು ಸಭೆಯ ಬಳಿಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ಡ್ಯಾನಿಶ್ ಅಲಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.ಈ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಿದ್ದರಾಮಯ್ಯ, ಡ್ಯಾನಿಶ್ ಅಲಿ ಅವರುಗಳು ಭಾಗವಹಿಸಿದ್ದರು.

ಮುಂದುವರೆದು ಮಾತನಾಡಿದ ಸಿದ್ದರಾಮಯ್ಯ ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಮಾಡಲು ರಾಹುಲ್ ಗಾಂಧಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಹಾಗೂ ನಿಗಮ ಮಂಡಳಿಗೆ ಶಾಸಕರನ್ನು ಮಾತ್ರವೇ ನೇಮಿಸಲಾಗುವುದು ಯಾವುದೇ ಇತರ ಜನಪ್ರತಿನಿಧಿಗಳನ್ನು ನೇಮಿಸುವುದು ಬೇಡ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದರೊಂದಿಗೆ ಡಿಸೆಂಬರ್ 9ಕ್ಕೆ ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದ್ದು, ಬೆಳಗಾವಿಯಲ್ಲಿ ಅದೇ ದಿನ ಅಧಿವೇಶನ ಪ್ರಾರಂಭವಾಗುವುದಕ್ಕೆ ಮುನ್ನಾ ಸಭೆ ನಡೆಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅದೇ ವೇಳೆಗೆ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ, ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುತ್ತಿಲ್ಲ, ಸಂಪುಟ ಸಭೆಗೆ ಗೈರಾದರು ಎಂದ ಮಾತ್ರಕ್ಕೆ ಅಸಮಾಧಾನ ಇದೆಯೆಂದು ಅರ್ಥವಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top