ಮನೋರಂಜನೆ

‘ಮುನಿರತ್ನ ಕುರುಕ್ಷೇತ್ರ’ ಚಿತ್ರದಿಂದ ಸಿಕ್ಕಿದ ಬ್ರೇಕಿಂಗ್ ನ್ಯೂಸ್- ಅಭಿಮಾನಿಗಳಿಗೆ ಹಬ್ಬ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಯಾವಾಗಲೋ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗುತ್ತಲೇ ಇದೆ.. ಆದರೆ ಒಂದಲ್ಲ ಒಂದು ಕಾರಣ ಹೇಳುತ್ತಾ ಚಿತ್ರವನ್ನು ಮುಂದೂಡುತ್ತಲೇ ಬಂದಿದ್ದಾರೆ. ಕುರುಕ್ಷೇತ್ರ ಸಿನಿಮಾ ಇಷ್ಟೊಂದು ಲೇಟ್ ಆಗುತ್ತಿರುವುದಕ್ಕೆ ಸ್ವತಃ ದರ್ಶನ್ ಅಭಿಮಾನಿಗಳಲ್ಲಿ ಅಸಹನೆ ಮೂಡಿಸಿರುವುದು ಸುಳ್ಳಲ್ಲ.

ಇಂಥಾ ಕುರುಕ್ಷೇತ್ರದ ಆಗಮನದ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೊಂದು ಸುದ್ದಿ ಬಂದಿದೆ. ಮುನಿರತ್ನ ಕುರುಕ್ಷೇತ್ರ ಚಿತ್ರ 2D ಮತ್ತು 3D ಆವೃತ್ತಿಯಲ್ಲಿ ಬರುತ್ತಿದ್ದು ಚಿತ್ರದ ಸದ್ಯ 2D ಕೆಲಸಗಳು ಮುಗಿದಿರುವುದರಿಂದ ಸೆನ್ಸಾರ್’ಗೆ ಕಳುಹಿಸಲು ಚಿತ್ರತಂಡ ರೆಡಿಯಾಗಿದೆ. ಸಿನಿಮಾವನ್ನು ರಿಲೀಸ್‍ಗೂ ಮೊದಲೇ ಕನ್ನಡ ಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ, ಚಿತ್ರರಂಗದ ಗಣ್ಯರಿಗೆ ತೋರಿಸುವ ಪ್ಲಾನ್ ನಿರ್ಮಾಪಕ ಮುನಿರತ್ನ ಅವರದ್ದು.

ಅಂದಹಾಗೆ ಕುರುಕ್ಷೇತ್ರ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50 ನೇ ಚಿತ್ರವಾಗಿದ್ದು ಚಿತ್ರದಲ್ಲಿ ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಷ್, ಸೋನು ಸೂದ್, ಡ್ಯಾನಿಶ್ ಅಖ್ತರ್ ಸೈಫಿ, ನಿಖಿಲ್ ಕುಮಾರ್, ರವಿಶಂಕರ್, ಮೇಘನಾ ರಾಜ್, ಭಾರತೀ ವಿಷ್ಣುವರ್ಧನ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಭಾರೀ ಬಜೆಟ್‌ನ ಕುರುಕ್ಷೇತ್ರದ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟಿಕೊಂಡಿವೆ. ಕರ್ನಾಟಕ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಕನ್ನಡದ ಕುರುಕ್ಷೇತ್ರ ಸದ್ದು ಮಾಡುತ್ತಿದೆ. ಕುರುಕ್ಕ್ಷೇತ್ರ ಚಿತ್ರಕ್ಕೆ ಭಾರತೀಯ ಮಹಾಕಾವ್ಯ ಮಹಾಭಾರತವನ್ನು ಆಧರಿಸಿ ಜೆ.ಕೆ. ಭಾರವಿಯವರು ಬರೆದಿದ್ದಾರೆ..ಸಿನಿಮಾವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ವಿ.ಹರಿಕೃಷ್ಣ ಚಿತ್ರಕ್ಕೆ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top