ಉದ್ಯೋಗ

381 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ

ಸರ್ಕಾರೀ ಉದ್ಯೋಗಗಳನ್ನು ಹರಸಿ ಹೊರಟಿರುವವರಿಗೆ ಇದೀಗ ಕರ್ನಾಟಕ ಲೋಕಸೇವಾ ಆಯೋಗದಿಂದ ಸಿಹಿಯಾದ ಹೊಸ ಸುದ್ದಿಯೊಂದು ಹೊರ ಬಂದಿದ್ದು. ಈ ವಿಷಯ ಕೆಲಸ ಹುಡುಕುತ್ತಿರುವ ಪ್ರತಿಯೊಬ್ಬರಿಗೂ ವರದಾನವಾಗಲಿದೆ.ಹೌದು, 381 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ ಕರ್ನಾಟಕ ಲೋಕಸೇವಾ ಆಯೋಗ.

ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಪ್ರಕಟಣೆ ಹೊರಡಿಸಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 16/01/2019 ಕೊನೆಯ ದಿನವಾಗಿದೆ.

ಗ್ರೂಪ್‌ ‘ಎ’ ಹುದ್ದೆಗಳು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯಾಧಿಕಾರಿ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇನ್ನು ಗ್ರೂಪ್ ‘ಬಿ’ ಹುದ್ದೆಗಳಲ್ಲಿ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ 221, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ನಿರ್ದೇಶಕರು 09 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಶುಲ್ಕ ವಿವರ: ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಇನ್ನು ಹಿಂದೂಳಿದ ವರ್ಗ 2ಎ, 2ಬಿ, 3ಎ ಮತ್ತು ಬಿ3 ಅಭ್ಯರ್ಥಿಗಳಿಗೆ 300 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 50 ರೂ ನಿಗದಿಪಡಿಸಲಾಗಿದೆ.

ಪಾವತಿಸಲು ಕೊನೆ ದಿನಾಂಕ 17-01-2019.

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ‘ಕಚೇರಿ ವೆಬ್ ಸೈಟ್’ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top