fbpx
ರಾಜಕೀಯ

ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ರಾಹುಲ್ ಗಾಂಧಿಗೆ ಸಮನ್ಸ್

ಮಾರ್ಚ್ 18 ರಂದು ನಡೆದ ಇಂಡಿಯನ್ ಕಾಂಗ್ರೆಸ್ ಸಮಾವೇಶದಲ್ಲಿ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಭಾರತೀಯ ಜನತಾ ಯುವ ಮೋರ್ಚಾ ನಾಯಕ ನವೀನ್ ಜಾ ಆರೋಪಿಸಿ ದೂರು ಸಲ್ಲಿಸಿದ್ದರು.

ಹೌದು,ನವೆಂಬರ್ 28ರಂದು ಇದರ ಕುರಿತುಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಆದರೆ ಇದೀಗ ರಾಂಚಿಯ ಉಪವಿಭಾಗೀಯ ಕೋರ್ಟ್ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ಗುಡಿಯಾ ರಾಹುಲ್ ಗಾಂಧಿಗೆ ರಾಂಚಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.

ಹಾಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗೆ ಸ್ಥಳೀಯ ಕೋರ್ಟ್ ಸಮನ್ಸ್ ನೀಡಿದೆ.

ರಾಹುಲ್ ಗಾಂಧಿ ಹೇಳಿಕೆಯಿಂದ ಪಕ್ಷದ ಘನತೆಗೆ ಧಕ್ಕೆಯಾಗಿದ್ದು,ನಮ್ಮ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಬಿಜೆಪಿಯವರು ದೂರು ನೀಡಿದ್ದರು.

ಈ ಹಿಂದೆ ಎಸ್ ಡಿಜೆಎಂ ಕೋರ್ಟ್, ನವೀನ್ ಝಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕೋರ್ಟ್ ಜುಡಿಶಿಯಲ್ ಕಮಿಷನರ್ ನವೀನ್ ಕುಮಾರ್ ಗೆ ಮೇಲ್ಮನವಿ ಸಲ್ಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top