fbpx
ಸಮಾಚಾರ

ಪ್ರಧಾನಿ ಮೋದಿ ವಿರುದ್ಧವೇ ಟೀಕೆ ಮಾಡಿದ ಪೇಜಾವರ ಶ್ರೀ.

ಪ್ರಧಾನಿ ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲಿಲ್ಲ. ಜನ ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ. ನೋಟ್ ಬ್ಯಾನ್ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ.. ದೇಶದ ಆರ್ಥಿಕ ಸುಧಾರಣೆ ಮತ್ತು ರಾಮಮಂದಿರಕ್ಕೆ ಪ್ರಧಾನಿ ಮೋದಿ ಆದ್ಯತೆ ಕೊಡಲಿ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಶ್ರೀಗಳು “ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡುಉ ದೇಶದ ಆರ್ಥಿಕ ಸುಧಾರಣೆ ಘಾಗೂ ರಾಮಮಂದಿರ ನಿರ್ಮಾಣಕ್ಕೆ ಮೋದಿ ಗಮನ ಹರಿಸಬೇಕಿದೆ.” ಎಂದಿದ್ದಾರೆ.

ಮೋದಿ ಆರ್ಥಿಕ ಸುಧಾರಣೆಗೆ ಹಾಗೂ ರಾಮಮಂದಿರ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಹಿಂದೂ ಮತದಾರರ ಉತ್ಸಾಹ ಹೆಚ್ಚಲಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಕಲವಾಗಲಿದೆ ಎಂದು ಶ್ರೀಗಳು ಸಲಹೆ ನೀಡಿದರು.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ ಇದರಿಂದ ಬಿಜೆಪಿಗೆ ನಷ್ಟ ಆಗಲಿದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ಈ ವಿಚಾರದಲ್ಲಿ ಮಾಜಿ ಪ್ರಧಾನಿ ಅಟಲ್ ಬೀಹಾರಿ ವಾಜಪೇಯಿ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅನುಸರಿಸಬೇಕು ಎಂದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top