ಉದ್ಯೋಗ

ಬೀದರ್‌ ನ್ಯಾಯಾಲಯದಲ್ಲಿ ಖಾಲಿ ಇದೆ 22 ಹುದ್ದೆಗಳು – ಇಂದೇ ಅರ್ಜಿ ಸಲ್ಲಿಸಿ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು. ಮುಖ್ಯವಾಗಿ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಮತ್ತು ಜವಾನರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಅಭ್ಯರ್ಥಿಗಳು ತಮ್ಮ ಸ್ವಂತ ಕೈ ಬರಹದಿಂದ ಅರ್ಜಿಗಳನ್ನು ಭರ್ತಿ ಮಾಡಿಸಲ್ಲಿಸಬೇಕಾಗಿದೆ.

ಇಂತಿಷ್ಟು ವಿವರಗಳು :

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31/1/2019.

ಶೀಘ್ರಲಿಪಿಗಾರರು 7, ಬೆರಳಚ್ಚುಗಾರರು 2, ಬೆರಳಚ್ಚು ನಕಲುಗಾರರು 5, ಜವಾನರು 8 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿದ್ಯಾರ್ಹತೆ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಸಾಮಾನ್ಯ ವರ್ಗ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳು 40 ವರ್ಷ ಪೂರ್ಣಗೊಳಿಸಿರಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೀದರ್‌

ಅಭ್ಯರ್ಥಿಗಳು ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ನೇಮಕಾತಿ ಆದೇಶವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top