fbpx
ರಾಜಕೀಯ

ಕುಮಾರಸ್ವಾಮಿ ನೇತೃತವಾದ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ – ಉತ್ತರ ಕರ್ನಾಟಕದ ಮಂದಿ ದಿಲ್ ಖುಷ್!

ಎಲ್ಲಾ ಕೆಲಸಗಳಿಗೆ ದೂರದ ಬೆಂಗಳೂರಿಗೆ ಹೋಗುವುದು ದುಬಾರಿಯಾಗುವುದರಿಂದ ಕೆಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ಥಳಾಂತರ ಮಾಡಬೇಕು ಎಂಬ ಬೇಡಿಕೆಯನ್ನು ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ಶುರುವಾದ ವರ್ಷದಿಂದಲೂ ಜನರು ಮತ್ತು ಜನಪ್ರತಿನಿಧಿಗಳು ಸರ್ಕಾರದ ಮುಂದಿಟ್ಟಿದ್ದರೂ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಕೊನೆಗೂ ಉತ್ತರ ಕರ್ನಾಟಕ ಜನರ ಬಹುಕಾಲದ ಬೇಡಿಕೆಯು ಈಡೇರಿದ್ದು, ಆರು ಇಲಾಖೆಗಳ ವ್ಯಾಪ್ತಿಯ ಒಂಬತ್ತು ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡುವ ಪ್ರಮುಖ ನಿರ್ಣಯವನ್ನು ಆರ್ಥಿಕ ಇಲಾಖೆಯ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೈಗೊಂಡಿರುವುದು ಉತ್ತರ ಕರ್ನಾಟಕದ ಮಂದಿಗೆ ಸಂತಸ ತಂದಿದೆ. ಹಾಗೂ ಅದೇ ಸಂದರ್ಭದಲ್ಲಿ ಸ್ಥಳಾಂತರವಾಗುವ ಕಚೇರಿಗಳ ಪೈಕಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎಷ್ಟುಕಚೇರಿಗಳನ್ನು ಆರಂಭಿಸಬೇಕು ಎಂಬುದನ್ನು ಸಭಾಪತಿ ಹಾಗೂ ಸ್ಪೀಕರ್‌ ಜೊತೆ ಸೇರಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂಬ ವಿಚಾರವೂ ಬೆಳಕಿಗೆ ಬಂದಿದೆ.

ಯಾವ ಯಾವ ಇಲಾಖೆಯ ಯಾವ ಯಾವ ಕಚೇರಿಗಳು ಸ್ಥಳಾಂತರವಾಗುವವು ?

  1. ಜಲಸಂಪನ್ಮೂಲ, ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ, ಪ್ರವಾಸೋದ್ಯಮ, ಕಾನೂನು ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವ್ಯಾಪ್ತಿಯ ಕಚೇರಿಗಳನ್ನು
    ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
  2. ಕೃಷ್ಣಾ ಜಲಭಾಗ್ಯ ನಿಗಮ, ಕರ್ನಾಟಕ ನೀರಾವರಿ ನಿಗಮ, ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬೆಂಗಳೂರನ್ನು ವಿಭಜಿಸಿ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮಂಡಳಿ), ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿ, ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರ ಕಚೇರಿಗಳು ಕಲಬುರಗಿಗೆ ಮತ್ತು ಎರಡು ಮಾಹಿತಿ ಆಯುಕ್ತರ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ಬಗ್ಗೆ ಯು ಬಿರುಸಾದ ಚರ್ಚೆ ಸಾಗುತ್ತಿದೆ ಎನ್ನಲಾಗಿದೆ.
  3. ಹಾಗೂ ಲೋಕಾಯುಕ್ತದಲ್ಲಿನ ಎರಡು ಉಪಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪಲೋಕಾಯುಕ್ತ ಕಚೇರಿಯನ್ನು ಸ್ಥಳಾಂತರ ಮಾಡುವುದರ ಕುರಿತಾಗಿಯೂ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಈ ಹಿಂದೆ ಉತ್ತರ ಕರ್ನಾಟಕ ಭಾಗಕ್ಕೆ ಯಾವ ಯಾವ ಇಲಾಖೆ ಮತ್ತು ನಿಗಮಗಳನ್ನು ಸ್ಥಳಾಂತರ ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿತ್ತು. ಇದೀಗ ಉಪಸಮಿತಿಯು ಅಧ್ಯಯನ ನಡೆಸಿ ವರದಿಯನ್ನು ನೀಡಿದೆ. ಈ ವರದಿಯ ಆಧಾರದ ಮೇಲೆ ಯೋಜನಾ ಇಲಾಖೆಯು ಪ್ರಸ್ತಾವನೆ ಸಿದ್ಧಪಡಿಸಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿದ್ದು, ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top