fbpx
ರಾಜಕೀಯ

ಬಿಜೆಪಿಗೆ ಮತ್ತೊಂದು ಶಾಕ್ – ಆರ್.ಎಲ್.ಎಸ್.ಪಿ ಮುಖ್ಯಸ್ಥ ಉಪೇಂದ್ರ ಖುಷ್ವಾಲಾ ಮಹಾಘಟಬಂಧನ್ ಜೊತೆ ಸೇರ್ಪಡೆ

ಪಂಚ ರಾಜ್ಯಗಳ ಚುನಾವಣೆಯ ಬಳಿಕ ಒಂದಲ್ಲ ಒಂದು ಆಘಾತಕ್ಕೆ ಒಳಗಾಗುತ್ತಿರುವ ಬಿಜೆಪಿ, ಇದೀಗ ಮತ್ತೊಂದು ಶಾಕ್ ಗೆ ಒಳಗಾಗಿದೆ. ಹೌದು, ಬಿಜೆಪಿಯ ಮಿತ್ರಪಕ್ಷವಾಗಿರುವ ಎನ್‌ ಡಿಎ ಜತೆ ಇದ್ದ ಪಕ್ಷವೊಂದು ಇದೀಗ ಕಾಂಗ್ರೆಸ್ ಪಕ್ಷದ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದು ಸಹಜವಾಗಿ ಇದು ಬಿಜೆಪಿಯ ಪಾಲಿಗೆ ನುಂಗಲಾರದ ತುತ್ತಾಗಿದೆ.

ಎನ್‍ಡಿಎ ಮಿತ್ರಕೂಟದಲ್ಲಿದ್ದ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ (ಆರ್.ಎಲ್.ಎಸ್.ಪಿ) ಮುಖ್ಯಸ್ಥ ಉಪೇಂದ್ರ ಖುಷ್ವಾಲಾ ಮಹಾಘಟಬಂಧನ್ ಜೊತೆ ಕೈ ಜೋಡಿಸಿದ್ದಾರೆ. ಬಿಜೆಪಿ ಪಕ್ಷ ದೇಶದ ನೈಜ ಸಮಸ್ಯೆಗಳನ್ನು ಬಿಟ್ಟು ಬೇರೆಡೆ ಗಮನ ಹರಿಸಿದೆ. ಇದರ ಭಾಗವಾಗಿರುವುದಕ್ಕೆ ನನಗೆ ಅವಮಾನವಾಗುತ್ತಿದೆ ಎಂದು ಆರೋಪಿಸಿದ್ದ ಕೇಂದ್ರ ಮಾನವ ಸಂಪನ್ಮೂಲ ರಾಜ್ಯ ಸಚಿವರಾಗಿದ್ದ ಉಪೇಂದ್ರ ಖುಷ್ವಾಲಾ ಡಿಸೆಂಬರ್ 10 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‍ ಡಿಎ ಒಕ್ಕೂಟದಿಂದ ಹೊರ ಬಂದಿದ್ದು ಇವರ ಈ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. .

ಎನ್‍ ಡಿಎ ಒಕ್ಕೂಟದಿಂದ ಹೊರ ಬಂದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಉಪೇಂದ್ರ ಖುಷ್ವಾಲಾ ಮಹಾಘಟಬಂದನ್ ಸೇರ್ಪಡೆ ಆಗಿದ್ದಾರೆ. ಇದರಿಂದಾಗಿ ಬಿಜೆಪಿಗೆ ತೊಂದರೆ ಆಗುವ ಸಾಧ್ಯತೆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ನಡೆಯುವ ಮುಂಚೆ ಬಿಜೆಪಿ ಸರ್ಕಾರ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತದೋ ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top