ಉದ್ಯೋಗ

381 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ . ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ ಇಂತಿದೆ :

  1. ಗ್ರೂಪ್‌ ‘ಎ’ ಹುದ್ದೆಗಳು ತೋಟಗಾರಿಕಾ ಇಲಾಖೆಯಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯದಾಧಿಕಾರಿ 143 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
  2. ಗ್ರೂಪ್ ‘ಬಿ’ ಹುದ್ದೆಗಳಲ್ಲಿ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ 221 ಹುದ್ದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ನಿರ್ದೇಶಕರು 09 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
  3. ಕೆಪಿಎಸ್‌ಸಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಕೆ ಶುರುವಾಗಿದ್ದು – 17/12/2018
  4. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ –  16/01/2019 ಹಾಗೂ ಅರ್ಜಿ ಸಲ್ಲಿಸಲು ನಿಗದಿ ಮಾಡಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
  5. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಒಂದೇ ಶುಲ್ಕವನ್ನು ಪಾವತಿ ಮಾಡಬೇಕು.
  6. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top