fbpx
ಉದ್ಯೋಗ

ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಬ್ಯಾಂಕ್ – ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ಆಫೀಸರ್ ತನ್ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದ್ದು . ಅರ್ಹ ಅಭ್ಯರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸಬೇಕಾಗಿದೆ.

ಹುದ್ದೆಗಳ ವಿವರ ಈ ಕೆಳಕಂಡಂತಿದೆ :

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ – 9/01/2019

ವಿದ್ಯಾರ್ಹತೆ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ಪಿಜಿ ಡಿಪ್ಲೊಮಾ ಮಾಡಿದವರು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಅಗ್ರಿಕಲ್ಚರ್ ಸೈನ್ಸ್ ಅಥವ ಕಾನೂನು ವಿಷಯದಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ :

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕನಿಷ್ಠ ವಯೋಮಿತಿ 21 ವರ್ಷಗಳು, ಗರಿಷ್ಠ 28 ವರ್ಷ (1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top