fbpx
ಉದ್ಯೋಗ

ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ : 392 ಹುದ್ದೆಗಳು ಖಾಲಿ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) 392 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 4 ಫೆಬ್ರವರಿ 2019 ಕೊನೆಯ ದಿನವಾಗಿದೆ.

ನ್ಯಾಷನಲ್ ಡಿಫೆನ್ಸ್ ಅಕಾಡಮಿ, ನಾವೆಲ್ ಅಕಾಡಮೆಯಲ್ಲಿನ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಹುದ್ದೆಗಳ ವಿವರ ಇಂತಿದೆ :

ಅರ್ಹತೆ :

ನ್ಯಾಷನಲ್ ಡಿಫೆನ್ಸ್ ಅಕಾಡೆಯಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ 10+2 ಮಾದರಿಯಲ್ಲಿ ಪಾಸ್ ಆಗಿರಬೇಕು. ಅಥವ ರಾಜ್ಯ ಶಿಕ್ಷಣ ಮಂಡಳಿ ನಡೆಸುವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

ಏರ್ ಪೋರ್ಸ್ ಎಂಡ್ ನಾವೆಲ್ ವಿಂಗ್ ಅಕಾಡಮೆಯಲ್ಲಿನ ಹುದ್ದೆಗೆ ಅರ್ಜಿ ಹಾಕುವವರು 10+2 ಮಾದರಿಯಲ್ಲಿ ಶಾಲೆ ಶಿಕ್ಷಣ ಪೂರ್ಣಗೊಳಿಸಿರಬೇಕು. ಅಥವ ರಾಜ್ಯ ಶಿಕ್ಷಣ ಮಂಡಳಿ ನಡೆಸುವ ಫಿಸಿಕ್ಸ್ ಮತ್ತು ಗಣಿತ ಪರೀಕ್ಷೆಯ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ :

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವಿವಾಹಿತ ಪುರುಷರಾಗಿರಬೇಕು. 2 ಜುಲೈ 2000 ನಂತರ 1 ಜುಲೈ 2003ರೊಳಗೆ ಜನಿಸಿದವರಾಗಿರಬೇಕು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕಗಳು : ಎಸ್‌ಸಿ/ಎಸ್‌ಟಿ/Sons of JCOs/NCOs/ORs ಯಾವುದೇ ಶುಲ್ಕ ಇಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top