fbpx
ಕ್ರಿಕೆಟ್

ಪಂದ್ಯ ಮುಗಿದ ಬಳಿಕ ಧೋನಿ ಕುರಿತು ​ಕೊಹ್ಲಿ ಹೇಳಿದ್ದೇನು ಗೊತ್ತಾ?

ನಿನ್ನೆ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಏಕದನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಎಂ ಎಸ್ ಧೋನಿ. ಅದರಲ್ಲೂ ಶತಕ ಸಿಡಿಸಿ ವಿರಾಟ್ ಕೊಹ್ಲಿ ಫೀಲ್ಡ್ ನಿಂದ ನಿರ್ಗಮನ ಹೊಂದಿದ ಮೇಲೆಯೂ ಗಟ್ಟಿಯಾಗಿ ನಿಂತು ಸೋಲಿನ ಸುಳಿಯಲ್ಲಿದ್ದ ತಂಡವನ್ನು ಗೆಲುವಿನ ದಡ ಸೇರಿಸಿದ್ದು ಮಾತ್ರ ಮಹೇಂದ್ರ ಸಿಂಗ್ ಧೋನಿ.

ಹೀಗಾಗಿ ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯವರನ್ನು ಕೊಂಡಾಡಿದ್ದಾರೆ. ” ಧೋನಿ ಅವರನ್ನು ಅಭಿಮಾನಿಗಳು ಯಾವ ಆಟದಿಂದ ಇಷ್ಟಪಡುತ್ತಾರೋ ಅದೇ ಆಟವನ್ನು ಪ್ರದರ್ಶಿಸಿದ್ದಾರೆ. ಧೋನಿ ಪಂದ್ಯವನ್ನು ಕೊನೆಯ ಕ್ಷಣದವರೆಗೆ ತೆಗೆದುಕೊಂಡು ಹೋಗುತ್ತಾರೆ. ಅಂತೆಯೆ ಆ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುತ್ತಾರೆ. ಅವರ ಮನಸ್ಸಿನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಮಾತ್ರ ಗೊತ್ತಿರುತ್ತದೆ” ಎಂದು ಹೇಳಿದ್ದಾರೆ.

 

 

ಇನ್ನೂ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 50 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ 298 ರನ್ ಬಾರಿಸಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ ಅವರ 104 ಹಾಗೂ ಧೋನಿ ಅವರ 55 ರನ್​​ಗಳ ನೆರವಿನಿಂದ ಇನ್ನೂ 4 ಎಸೆತ ಬಾಕಿ ಇರುವಂತೆಯೆ ಗೆಲುವಿನ ನಗೆ ಬೀರಿತ್ತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಸಮಬಲ ಸಾಧಿಸಿದ್ದು, ಕೊನೆಯ ಪಂದ್ಯ ರೋಚಕವಾಗಿರಲಿದೆ.

ಒಟ್ಟಿನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವುದರ ಮೂಲಕ ತಮ್ಮನ್ನು ಟೀಕಿಸುತ್ತಿದ್ದವರಿಗೆ ಧೋನಿ ಖಡಕ್ ಉತ್ತರವನ್ನು ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top