fbpx
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ನಲ್ಲಿರೋ 10 ಸಂಖ್ಯೆಗಳು ಏನನ್ನು ಸೂಚಿಸುತ್ತದೆ ಗೊತ್ತೇ ?

ಆಧಾರ್ ಕಾರ್ಡ್ ಹೊರತುಪಡಿಸಿದರೆ ಪ್ಯಾನ್ ಕಾರ್ಡ್ ಒಂದು ಉತ್ತಮ ಮತ್ತು ಅತ್ಯವಶ್ಯ ಐಡಿ ಪ್ರೂಫ್ ಆಗಿದ್ದು. ಇತ್ತೀಚಿಗೆ ಇದರ ಬಳಕೆ ತುಸು ಹೆಚ್ಚಾಗಿದೆ. ಈಗೀಗಂತೂ ಪ್ಯಾನ್ ಕಾರ್ಡ್ ಇಲ್ಲದೆ ಎಷ್ಟೋ ಕೆಲಸಗಳು ನಡೆಯುತ್ತಲೇ ಇಲ್ಲ. ಭಾರತದ ನಾಗರೀಕರೇ ಆಗಲಿ ಅಥವಾ ಅನಿವಾಸಿ ಭಾರತೀಯರೇ(ಎನ್ಆರ್ಐ) ಆಗಿದ್ದರೂ ಭಾರತದಲ್ಲಿ ಆದಾಯ ತೆರಿಗೆ ಪಾವತಿ ಮಾಡಲು ಅಥವಾ ಹಣಕಾಸು ವ್ಯವಹಾರಗಳನ್ನು ಸಮಗ್ರವಾಗಿ ನಿರ್ವಹಿಸಲು ಪ್ಯಾನ್ ಕಾರ್ಡ್ ಅತ್ಯವಶ್ಯಕ.

ಇಂದಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಕೇವಲ ಆದಾಯ ತೆರಿಗೆ ಪಾವತಿಗೆ ಮಾತ್ರವಲ್ಲದೇ, ಅನೇಕ ರೀತಿಯ ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತಿದೆ . ಹೀಗಾಗಿ ಪ್ಯಾನ್ ಕಾರ್ಡ್ ನಲ್ಲಿ ಏನೇನು ಇರುತ್ತದೆ ಮತ್ತು 10 ಸಂಖ್ಯೆಗಳು ಏನನ್ನು ಸೂಚಿಸುತ್ತವೆ? ಎಂದು ತಿಳಿಯೋಣ ಬನ್ನಿ :

ಪ್ಯಾನ್ ಕಾರ್ಡ್ ನಲ್ಲಿ ಏನೇನು ಇರುತ್ತದೆ?

ಪಾನ್ ಕಾರ್ಡಿನ ಮೊದಲನೇ ಸಾಲಿನಲ್ಲಿ ವ್ಯಕ್ತಿಯ ಸಂಪೂರ್ಣ ಹೆಸರು, ಎರಡನೇ ಸಾಲಿನಲ್ಲಿ ಆಕೆಯ/ಆತನ ತಂದೆ ಹಾಗೂ ಪೋಷಕರ ಹೆಸರು. ಮೂರನೇ ಸಾಲಿನಲ್ಲಿ ಜನ್ಮದಿನಾಂಕ. ನಾಲ್ಕನೇ ಸಾಲಿನಲ್ಲಿ 10 ಅಂಕಿಗಳ ಪರ್ಮನೆಂಟ್ ಅಕೌಂಟ್ ನಂಬರ್ ಹಾಗೂ ಐದನೇ ಸಾಲಿನಲ್ಲಿ ಪಾನ್ ಕಾರ್ಡ್ ಅರ್ಜಿದಾರರ ಸಹಿ ಹಾಗೂ ಅವರ ಭಾವಚಿತ್ರ ಮುದ್ರಿತವಾಗಿರುತ್ತದೆ. ಇದಲ್ಲದೇ ಆದಾಯ ತೆರಿಗೆ ಇಲಾಖೆಯ ಹಾಲೋಗ್ರಾಮ್ ಸಹ ಇರುತ್ತದೆ. ಒಂದು ವೇಳೆ ಸಂಸ್ಥೆಗಳು ಪಾನ್ ಕಾರ್ಡ್ ಪಡೆದುಕೊಂಡಿದ್ದರೆ, ಅದರಲ್ಲಿ ಸಂಸ್ಥೆಯ ಹೆಸರು, ನೋಂದಣಿ ದಿನಾಂಕ ಹಾಗೂ ಇತರೆ ಮಾಹಿತಿಗಳು ಮುದ್ರಿತವಾಗಿರುತ್ತವೆ.

 

 

ಹಾಗಾದರೆ ಪ್ಯಾನ್ ಕಾರ್ಡಿನ 10 ಸಂಖ್ಯೆಗಳು ಏನನ್ನು ಸೂಚಿಸುತ್ತವೆ?

ಪಾನ್ ಕಾರ್ಡಿನ ಮೊದಲ 5 ಇಂಗ್ಲೀಷಿನ ಅಕ್ಷರಗಳನ್ನು ಕೋರ್ ಗುಂಪುಗಳೆಂದು ಕರೆಯುತ್ತಾರೆ. ಇದರಲ್ಲಿನ ಮೊದಲನೇ 3 ಅಕ್ಷರಗಳು `ಎ’ ಇಂದ `ಝೆಡ್’ ವರೆಗೆ ಸಾಮಾನ್ಯವಾಗಿ ಇರುತ್ತವೆ. 4ನೇ ಅಕ್ಷರವು ಪಾನ್ ಕಾರ್ಡ್ ಯಾವುದಕ್ಕೆ ಸಂಬಂಧಪಟ್ಟಿದೆ ಎಂಬುದನ್ನು ತೋರಿಸುತ್ತದೆ. ಸಿ-ಕಂಪನಿ, ಪಿ- ವ್ಯಕ್ತಿ, ಎಚ್-ಹಿಂದೂ ಅವಿಭಕ್ತ ಕುಟುಂಬ, ಎಫ್- ವಿಭಾಗ, ಎ-ವ್ಯಕ್ತಿಗಳ ಗುಂಪು, ಟಿ-ಟ್ರಸ್ಟ್, ಬಿ-ವ್ಯಕ್ತಿಯ ಗುರುತು, ಎಲ್-ಸ್ಥಳೀಯ ಸಂಸ್ಥೆಗಳು, ಜೆ-ಕಾನೂನು ಪ್ರಕಾರ ವ್ಯಕ್ತಿ ಎಂದು ಪರಿಗಣಿಸಿರುವುದು, ಜಿ-ಸರ್ಕಾರ ಆಗಿರುತ್ತದೆ. ಅಲ್ಲದೇ 5ನೇ ಅಕ್ಷರ ವ್ಯಕ್ತಿಯ ಹೆಸರಿನ ಮೊದಲನೇ ಅಕ್ಷರವಾಗಿರುತ್ತದೆ. ಇದಲ್ಲದೇ 6 ರಿಂದ 9ನೇ ಸ್ಥಾನದಲ್ಲಿ ಬರುವ ಅಂಕಿಗಳು 0001 ರಿಂದ 9999ರವರೆಗಿನ ಸರಣಿ ಸಂಖ್ಯೆಗಳಾಗಿರುತ್ತವೆ. ಕೊನೆಯ ಇಂಗ್ಲೀಷಿನ ಸಂಖ್ಯೆ ಅಂಕಿಗಳನ್ನು ಪ್ರತಿನಿಧಿಸುವ ಅಕ್ಷರವಾಗಿರುತ್ತದೆ.

ಉದಾಹರಣೆಗೆ : ABCPS567A ಆಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top