fbpx
ಮನೋರಂಜನೆ

ಪೈಲ್ವಾನ್ ಡುಯೆಟ್ ಸಾಂಗ್‌ಗೆ ಪ್ರಭುದೇವ ಸಹೋದರನ ಕೊರಿಯೋಗ್ರಫಿ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಚಿತ್ರತಂಡ ಇತ್ತೀಚಿಗಷ್ಟೇ ಟೈಟಲ್ ಹಾಡಿನ ಚಿತ್ರೀಕರಣ ಮುಗಿಸಿಕೊಂಡಿತ್ತು. ಬರೋಬ್ಬರಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರೋ ಬಾರೋ ಪೈಲ್ವಾನ್ ಎಂಬ ಸಾಲಿನ ಹಾಡಿಗೆ ಬಾಲಿವುಡ್ ಖ್ಯಾತ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ಕಿಚ್ಚನಿಗೆ ಡ್ಯಾನ್ಸ್ ಹೇಳಿಕೊಟ್ಟಿದ್ದರು. ಇದೀಗ ಮತ್ತೊಂದು ಹಾಡಿನ ಶೂಟಿಂಗ್ ಗೆ ರೆಡಿಯಾಗುತ್ತಿದೆ. ಇದೀಗ ಪ್ರಭುದೇವಾ ಅವರ ಸಹೋದರ ರಾಜು ಸುಂದರಂ ಕಿಚ್ಚನನ್ನು ಕುಣಿಸಲು ಬರುತ್ತಿದ್ದಾರೆ..

ಹೌದು, ಸದ್ಯದಲ್ಲೇ ಪೈಲ್ವಾನ್ ಚಿತ್ರದ ಡುಯೆಟ್ ಹಾಡನ್ನು ಚಿತ್ರೀಕರಿಸಲು ಚಿತ್ರತಂಡ ಯೋಜಿಸಿದ್ದು ಈ ಹಾಡಿಗೆ ಖ್ಯಾತ ಕೊರಿಯೋಗ್ರಾಫರ್ ರಾಜು ಸುಂದರಂ ನೃತ್ಯ ಸಂಯೋಜನೆ ಮಾಡಲಿದ್ದಾರೆ.. ಹಾಡಿನಲ್ಲಿ ಸುದೀಪ್ ಜೊತೆ ನಾಯಕಿ ಆಕಾಂಕ್ಷ ಸಿಂಗ್ ಹೆಜ್ಜೆ ಹಾಕಲಿದ್ದಾರೆ.. ಇನ್ನು ಈ ಹಾಡಿನ ಚಿತ್ರೀಕರಣದೊಂದಿಗೆ ಪೈಲ್ವಾನ್ ಚಿತ್ರತಂಡ ಶೂಟಿಂಗ್ ಗೆ ಕುಂಬಳಕಾಯಿ ಹೊಡೆಯಲಿದೆ.

 

 

ಪೈಲ್ವಾನ್ ಬಗ್ಗೆ:
ಪೈಲ್ವಾನ್ ಚಿತ್ರದ ಬಗ್ಗೆ ಹೇಳಬೇಕೆಂದರೆ ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ಸುದೀಪ್’ಗೆ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಬಾಲಿವುಡ್ ನಟ ಸುನಿಲ್ ಶೆಟ್ಟಿ, ಕರುಣ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. RRR ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರವನ್ನು ನಿರ್ದೇಶಕ ಕೃಷ್ಣಾ ಅವರ ಪತ್ನಿ ಸ್ವಪ್ನ ಕೃಷ್ಣಾ ನಿರ್ಮಾಣ ಮಾಡುತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮತ್ತು ಕರುಣಾಕರ್ ಅವರ ಕ್ಯಾಮೆರಾ ಕೈಚಳಕ ಚಿತ್ರಕ್ಕಿರಲಿದೆ.

ಕನ್ನಡವೂ ಸೇರಿ ಒಟ್ಟು ಎಂಟು ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಬಗ್ಗೆ ಸ್ವತಃ ಕಿಚ್ಚನ ಅಭಿಮಾನಿಗಳು ತಲೆಕೆಡಿಸಿಕೊಂಡು ಕೂತಿದ್ದರೇ ಮಾಮೂಲಿ ಪ್ರೇಕ್ಷಕರಲ್ಲೂ ವಿಭಿನ್ನ ಕ್ರೇಜ್ ಹುಟ್ಟುಹಾಕುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿರುವ ಚಿತ್ರದ ಮೇಕಿಂಗ್ ಸ್ಟಿಲ್ಲುಗಳೇ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ ಇನ್ನು ಮೊನ್ನೆ ತಾನೇ ರಿಲೀಸ್ ಆದ ಟೀಸರ್ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top