fbpx
ಮನೋರಂಜನೆ

‘ಮಂಡ್ಯದಲ್ಲಿ ಸುಮಲತಾಗೆ ಟಿಕೆಟ್​ ಕೊಡುವ ಮಾತೇ ಇಲ್ಲ’ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕಣಕ್ಕಿಳಿಯುವ ಸುಮಲತಾ ಆಸೆಗೆ ಈಗ ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಣ್ಣೀರೆರಚಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸ್ಪರ್ದಿಸಬೇಕೆಂದು ಬಯಸಿದ್ದ ಹಿರಿಯ ನಟಿ ಸುಮಲತಾ ಅಂಬರೀಷ್ ಅವರಿಗೆ ಭಾರೀ ಹಿನ್ನಡೆಯಾಗಿದೆ. “ಮಂಡ್ಯದಿಂದ ಸುಮಲತಾಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ” ಎಂದು ಮಾಜಿ ಮುಖ್ಯಮಂತ್ರೀ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಷ್ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ, ಈಗಾಗಲೇ ಮಂಡ್ಯದಲ್ಲಿ ಜೆಡಿಸ್ ಸಂಸದರಿದ್ದಾರೆ. ಹಾಲಿ ಸಂಸದರಿರುವಾಗ ಕ್ಷೇತ್ರ ಬಿಟ್ಟುಕೊಡುವಂತೆ ಕೇಳಲು ಸಾಧ್ಯವಿಲ್ಲ, ಮೈತ್ರಿ ನಿರ್ಧಾರದಂತೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ನಿಂದ ಸುಮಲತಾಗೆ ಟಿಕೆಟ್​ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಹೇಳಿಕೆಯಿಂದ ಸುಮಲತಾ ರಾಜಕೀಯ ಪ್ರವೇಶ ಇಬ್ಬಗೆಯಲ್ಲಿ ಸಿಲುಕಿದಂತಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top