fbpx
ಉದ್ಯೋಗ

ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ- ಕೂಡಲೇ ಅರ್ಜಿ ಹಾಕಿ.

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 107 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ . ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಿ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/4/2019 ಕೊನೆಯ ದಿನ. ಹುದ್ದೆಗಳ ನೇಮಕಾತಿಯನ್ನು ಸ್ಮರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಇನ್ನು ಗರಿಷ್ಟ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಶುಲ್ಕ ಪಾವತಿ ಹೇಗೆ?
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಚಲನ್ ಪ್ರತಿಯನ್ನು ಪಡೆದು ಅಂಚೆ ಕಚೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಯಲ್ಲಿ ಈ ಪೇಮೆಂಟ್ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು. (ಡಿಡಿ/ಪೋಸ್ಟಲ್ ಆರ್ಡರ್/ಮನಿ ಆರ್ಡರ್ ಇವುಗಳನ್ನು ಸ್ವೀಕರಿಸುವುದಿಲ್ಲ) ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಶುಲ್ಕಗಳು:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.
ಪ.ಜಾ/ಪ.ಪಂ/ಪ್ರವರ್ಗ -1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ವೇತನ ಶ್ರೇಣಿ, ವಿದ್ಯಾರ್ಹತೆ ಮತ್ತು ನೇಮಕಾತಿ ಆದೇಶವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
http://www.kpsc.kar.nic.in/

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top