fbpx
ಉದ್ಯೋಗ

10ನೇ ತರಗತಿ ಪಾಸ್ ಆದವರಿಗೆ ವಿಜಯ ಬ್ಯಾಂಕಿನಲ್ಲಿ ಹುದ್ದೆಗಳಿವೆ- ಬೇಗ ಅರ್ಜಿ ಹಾಕಿ.

ಹತ್ತನೇ ತರಗತಿ ಪಾಸ್ ಆಗಿರುವವರಿಗೆ ವಿಜಯ್ ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದ್ದು ತನ್ನ ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.ಒಟ್ಟು 432ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮಾರ್ಚ್ 14,2019ರೊಳಗೆ ಸಲ್ಲಿಸಬಹುದು.

ಹುದ್ದೆ ಹೆಸರು: ಜವಾನ(310), ತಾತ್ಕಾಲಿಕ ಸ್ವೀಪರ್(122)
ಒಟ್ಟು ಹುದ್ದೆ : 432
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 14, 2019

ವಿದ್ಯಾರ್ಹತೆ: ಜವಾನ ಮತ್ತು ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಮಾರ್ಚ್ 1,2019ಕ್ಕೆ ಅನ್ವಯವಾಗುಂತೆ ಕನಿಷ್ಠ 18 ರಿಂದ ಗರಿಷ್ಠ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 50 ರೂ. ಮತ್ತು ಇತರೆ ಅಭ್ಯರ್ಥಿಗಳೂ 150 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top