fbpx
ಮನೋರಂಜನೆ

ಮಂಡ್ಯದಲ್ಲಿ ಪ್ರಚಾರ ಆರಂಭಿಸಿದ ನಿಖಿಲ್ ಕುಮಾರ್, ಬೆಂಗಳೂರಿಗೆ ಸುಮಲತಾ ಅಂಬರೀಶ್

ಹೈವೋಲ್ಟೇಜ್ ಕಣವಾಗಿ ಪರಿಣಮಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ದಿನಾಂಕ ಘೋಷಿಸಿರುವ ಬೆನ್ನಲ್ಲೇ ರಾಜಕೀಯ ರಂಗೇರಿದೆ. ಈ ಸಲ ಮಂಡ್ಯ ಲೋಕಸಭೆ ಕ್ಷೇತ್ರ ತೀರಾ ಕುತೂಹಲ ಮೂಡಿಸಿದ್ದು ಒಂದು ಕಡೆ ರೆಬೆಲ್ ಸ್ಟಾರ್ ಅಂಬರೀಷ್ ಪತ್ನಿ ಸುಮಲತಾ ಚುನಾವಣೆಗೆ ಅಭ್ಯರ್ಥಿಯ ಸ್ಥಾನದಲ್ಲಿ ಮಂಡ್ಯದಲ್ಲಿ ಭಾಗವಹಿಸಿದರೆ, ಇನ್ನೊಂದು ಕಡೆ ಮುಖ್ಯಮಂತ್ರಿಯ ಮಗ ನಿಖಿಲ್ ಕುಮಾರ್ ಸ್ವಾಮಿ ಕೂಡ ಅದೇ ಜಾಗಕ್ಕೆ ಸುಮಲತಾ ಅವರಿಗೆ ಪೈಪೋಟಿ ನೀಡಲಿದ್ದಾರೆ.. ಜಿದ್ಧಾ ಜಿದ್ದಿ ಕಣವಾಗಿರುವ ಸಕ್ಕರೆ ನಾಡಿನಲ್ಲಿ ಸುಮಲತಾ ಹಾಗೂ ಜೆಡಿಎಸ್​ ನಡುವೆ ರಾಜಕೀಯ ತಾರಕಕ್ಕೇರುತ್ತಿದೆ.

ಮಂಡ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ನಿನ್ನೆಯಷ್ಟೇ ನಿಖಿಲ್ ಕುಮಾರ್ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದು, ಅವರು ಪಕ್ಷದ ನಾಯಕರೊಂದಿಗೆ ಪ್ರಚಾರ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುಮಲತಾ ಚರ್ಚೆ:
ಸುಮಲತಾ ಅವರು ಕೆಲವು ದಿನಗಳಿಂದ ಮಂಡ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದರು. ಆದರೆ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ..ಮಂಡ್ಯ ಪ್ರವಾಸಕ್ಕೆ ತಾತ್ಕಾಲಿಕ ಬ್ರೇಕ್ ಕೊಟ್ಟಿರುವ ಸುಮಲತಾ ಮಂಡ್ಯದಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ.. ತಾವು ಪಕ್ಷೇತರವಾಗಿ ಮಂಡ್ಯದಿಂದ ಸ್ಪರ್ಧಿಸಿದರೆ ಬಿಜೆಪಿ ಬೆಂಬಲ ಪಡೆಯುವ ಅಥವಾ ಇಲ್ಲವೇ ಪಕ್ಷವನ್ನು ಸೇರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಸುಮಲತಾಗೆ ಬಿಜೆಪಿ ಬೆಂಬಲ:
ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ನಟಿ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಲು ನಿರ್ಧರಿಸಿರುವ ಕೇಂದ್ರ ಬಿಜೆಪಿ ನಾಯಕರು ಅಭ್ಯರ್ಥಿಯನ್ನು ಹಾಕದರಿಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top