ಚಿತ್ರೀಕರಣದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗು ಇಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಭರ್ಜರಿ’ ‘ದನಕಾಯೋನು’ ‘ರಣಂ’ ಮುಂತಾದ ಸಿನಿಮಾಗಳ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
‘ರಣಂ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಸಿಲಿಂಡರ್ ಅವಘಡ ಸಂಭವಿಸಿತ್ತು. ಈ ಸಂಬಂಧ ಸ್ಟಂಟ್ ಮಾಸ್ಟರ್ ಅನ್ನು ಪೊಲೀಸರು ಬಂಧಿಸಿದ್ದರು. ಆಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ತಲೆಮರೆಸಿಕೊಂಡಿದ್ದರು. ಇಂದು ಬಾಗಲೂರು ಪೊಲೀಸರು ಶ್ರೀನಿವಾಸ್ ಅವರನ್ನು ಸೆರೆಯಿಡಿದಿದ್ದಾರೆ.
ಏನಿದು ಪ್ರಕರಣ:
ನಟ ಚೇತನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದಲ್ಲಿ ಮೂಡಿಬರುತ್ತಿರುವ ‘ರಣಂ’ ಚಿತ್ರದ ಪ್ರಮುಖ ಸನ್ನಿವೇಶದ ಶೂಟಿಂಗ್ ವೇಳೆ ಬೆಂಕಿಯ ದೃಶ್ಯಕ್ಕಾಗಿ ಸಿಲಿಂಡರ್ ಬಳಸಿದ್ದರು. ನಗರದ ಬಾಗಲೂರು ಬಳಿ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಆಗ ರಣಂ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ಭಾಗವಾಗಿ ಕಾರನ್ನು ಬ್ಲಾಸ್ಟ್ ಮಾಡುವ ದೃಶ್ಯ ಶೂಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ವೀಕ್ಷಿಸುತ್ತಿದ್ದ ತಾಯಿ ಮತ್ತು ಮಗು ಮೃತಪಟ್ಟಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
