fbpx
ಸಮಾಚಾರ

ಎರಡನೇ ಹಂಡತಿ, ಮಕ್ಕಳ ಬಗ್ಗೆ ಮಾಹಿತಿ ನೀಡದ ಆರೋಪ: ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೊಸ ತಲೆನೋವುವೊಂದು ಶುರುವಾಗಿದ್ದು ಎರಡನೇ ಹಂಡತಿ ಮತ್ತು ಮಕ್ಕಳ ಬಗ್ಗೆ ಮಾಹಿತಿ ನೀಡದ ಆರೋಪ ಕೇಳಿಬಂದಿದೆ.. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 2ಕ್ಕೆ ವಿಚಾರಣೆ ನಿಗದಿ ಮಾಡಿ ಆದೇಶ ಹೊರಡಿಸಿದೆ. ಅಂದು ಕುಮಾರಸ್ವಾಮಿ ಅವರು ವಿಚಾರಣೆಯನ್ನು ಎದುರಿಸಬೇಕಾಗಿದೆ

2018ರ ವಿಧಾನ ಸಭಾ ಚುನಾವಣಾಯಲ್ಲಿ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ, ಕುಮಾರಸ್ವಾಮಿ ಅವರು ತಮ್ಮ ಎರಡನೇ ಪತ್ನಿ, ಮಕ್ಕಳ ಬಗ್ಗೆ ಮಾಹಿತಿ ನೀಡಿಲ್ಲ.. ಉದ್ದೇಶಪೂರ್ವಕವಾಗಿಯೇ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ತನಿಖೆಗೆ ಆದೇಶಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ, ಮಗಳು ಶಮಿಕಾ ಕುಮಾರಸ್ವಾಮಿ ಮತ್ತು‌ ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿ ಇದೆ.. ಆ ಆಸ್ತಿಯನ್ನು ಮರೆಮಾಚುವ ಉದ್ದೇಶದಿಂದಲೇ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಫಿಡವಿಟ್‌ನಲ್ಲಿ ಉದ್ದೇಶ ಪೂರ್ವಕವಾಗಿ ಉಲ್ಲೇಖಿಸಿಲ್ಲ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಗೆ ಆದೇಶಿಸಿ ಸೂಕ್ತ ತನಿಖಾ ಸಂಸ್ಥೆಗೆ ಪ್ರಕರಣದ ವಿಚಾರಣೆಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಅವರು ಮೇ 2ಕ್ಕೆ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top