fbpx
ಸಮಾಚಾರ

#JusticeForMadhu- ಮಧು ಸಾವು ಪ್ರಕರಣ: ಆರೋಪಿ ಸುದರ್ಶನ್ ಸಿಐಡಿ ವಶಕ್ಕೆ

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಸದ್ದು ಮಾಡುತ್ತಿದೆ. ಕನ್ನಡ ಚಿತ್ರರಂಗದ ಗಣ್ಯರು , ನಟ ನಟಿಯರು ಸಹ ಇದನ್ನು ಖಂಡಿಸಿದ್ದಾರೆ.

ಮಧು ಸಾವಿಗೆ ಸಂಬಂಧ ಪಟ್ಟಂತೆ ಆರೋಪಿ ಸುದರ್ಶನ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿ ಮಧು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಸುದರ್ಶನ್ ಯಾದವ್ ನನ್ನು ಸಿಐಡಿ ಪೊಲೀಸರು ನಾಲ್ಕು ದಿನಗಳ ಕಾಲ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಕಾರಾಗೃಹದಿಂದ ನಾಲ್ಕು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.

ಸಾಮಾಜಿಕ ತಾಣಗಳಲ್ಲಿ #JusticeForMadhu ಎಂಬ ಅಭಿಯಾನವನ್ನು ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅನುಮಾನಗಳು ವ್ಯಕ್ತವಾಗಿದ್ದರು, ಮಧು ಪತ್ತಾರ ಅನುಮಾನಸ್ಪದ ಸಾವನ್ನು ಮಾಧ್ಯಮ ನಿರ್ಲಕ್ಷಿಸುತ್ತಿದೆ ಎಂದು ಸಾಮಾಜಿಕ ತಾಣಗಳಲ್ಲಿ ನೆಟ್ಟಿನಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಏನಿದು ಘಟನೆ:
ನಗರದ ನವೋದಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದ ನಗರದ ಐಡಿಎಸ್ ಎಂಟಿ ಬಡಾವಣೆ ನಿವಾಸಿ ಮಧು ಪತ್ತಾರ್ ಏಪ್ರಿಲ್ 13 ರಂದು ಕಾಣೆಯಾಗಿದ್ದಾಳೆ. ಪೋಷಕರು ಗೊತ್ತಿರುವ ಎಲ್ಲಾ ಕಡೆ ಹುಡುಕಾಡಿ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಆದ್ರೆ ಮಧು ಸುಳಿವು ಮಾತ್ರ ಸಿಕ್ಕಿರಲಿಲ್ಲ. ಮಧು ಸಹೋದರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವಂತೆ ಏಪ್ರಿಲ್ 17ಕ್ಕೆ ಮಧು ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಾಗಿತ್ತು, ಆದ್ರೆ ಏಪ್ರಿಲ್ 16 ಕ್ಕೆ ಮಧು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top