fbpx
ಸಮಾಚಾರ

ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು.

ಮಹಿಳೆಯರನ್ನು ಅಪಮಾನ ಮಾಡುವ ರೀತಿಯಲ್ಲಿ ಬಿಜೆಪಿ ಶಾಸಕ ಸಿಟಿ ರವಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕ ದೂರು ನೀಡಿದೆ. ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ನೇತೃತ್ವದ ನಿಯೋಗದ ಸದಸ್ಯರು ಮಹಿಳಾ ಆಯೋಗದ ಅಧ್ಯಕ್ಷರನ್ನು ಗುರುವಾರ ಭೇಟಿಯಾಗಿ ದೂರು ನೀಡಿದರು.

 

 

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರಿಗೆ ದೂರು ನೀಡಿದ್ದು, ಸಿ.ಟಿ. ರವಿಯವರು ಶಾಸಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ತ್ರೀ ಕುಲಕ್ಕೆ ಅಪಮಾನವಾಗುವಂತಹ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಹಿಳಾ ಸಮುದಾಯವನ್ನು ಕೀಳು ರೀತಿಯಲ್ಲಿ ಕಂಡಿದ್ದು, ಸ್ತ್ರೀಯರ ಘನತೆಗೆ ಧಕ್ಕೆ ತಂದಿರುವ ಹಾಗೂ ಮಹಿಳಾ ವಿರೋಧಿ ಹೇಳಿಕೆ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಿದ್ದಾರೆ.

“ಮೋದಿ ವಿರೋಧಿಸುವವರು ತಾಯಿ ಗಂಡರು… ಯಾರಾದರೂ ಜಾತಿಗೆ ಕಾರಣಕ್ಕೆ, ಧರ್ಮದ ಕಾರಣಕ್ಕೆ ಮತ ಹಾಕದೇ ಹೋದರೆ ಉಂಡ ಮನೆಗೆ ದ್ರೋಹ ಬಗೆದಂತೆ…” ಎಂದು ಸಿಟಿ ರವಿ ಹೇಳಿದ್ದಾರೆ. ಈ ಹೇಳಿಕೆಯನ್ನು ರಾಜ್ಯದ ಪ್ರಮುಖ ಮಾಧ್ಯಮಗಳು ಹಾಗೂ ತನ್ನ ಟ್ವೀಟರ್ ಖಾತೆಯಲ್ಲಿ ಹಾಗೂ ಜಾಲತಾಣಗಳಲ್ಲಿ ಪ್ರಕಟಿಸಿವೆ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ. ​​

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top