fbpx
ಸಮಾಚಾರ

ಸಾಲ ಮನ್ನಾ ಬದಲು ರೈತರ ಬೆಳೆಗೆ ಸೂಕ್ತ ಬೆಲೆ ಕೊಡಿ: ಸಿಎಂ HDKಗೆ ಟಾಂಗ್ ಕೊಟ್ಟ ದರ್ಶನ್.

‘ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ಪ್ರಸ್ತಾಪಿಸದೆ ಪರೋಕ್ಷವಾಗಿ ಟಾಂಗ ಕೊಟ್ಟರು “ರೈತರು ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ” ಎಂದರು.

‘ಕೃಷಿಕರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿದರೆ, ರೈತರೇ ಸಾಲ ತೀರಿಸುತ್ತಾರೆ. ರೈತರು ಬೆಳೆದ ಬೆಳೆಗೆ ಒಳ್ಳೆ ಬೆಲೆ ಸಿಗುವಂತಾಗಲಿ. ಹಾಗೆ ಮಾಡಿದರೆ ಸಾಲಮನ್ನಾ ಪರಿಸ್ಥಿತಿ ಉದ್ಭವಿಸುವುದಿಲ್ಲ. ರೈತರೇ ಸರ್ಕಾರಕ್ಕೆ ಸಾಲ ಕೊಡ್ತಾರೆ. ಜೈ ಜವಾನ್.. ಜೈ ಕಿಸಾನ್’ ಎಂದಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಸಿಎಂ ಕುಮಾರಸ್ವಾಮಿ ಪದೇ ಪದೇ ನಮ್ಮ ಸರ್ಕಾರದಿಂದ ಸಾಲಮನ್ನಾವಾಗಿದೆ ಎಂದು ಮಂಡ್ಯದಲ್ಲಿ ಹೇಳಿದ್ದರು. ಈ ಕುರಿತು ಈಗ ಪರೋಕ್ಷವಾಗಿ ದರ್ಶನ್​ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top